Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸತೀಶನ್, ವೇಣುಗೋಪಾಲ ಅಥವಾ ಚೆನ್ನಿತ್ತಲ…? ಕೇರಳದ ಮುಂದಿನ ಸಿಎಂ ಯಾರು ?

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಪೂರ್ಣ ಬಹುಮತದೊಂದಿಗೆ ಭರ್ಜರಿ ಜಯಭೇರಿ ಬಾರಿಸಿದೆ. ಮೈತ್ರಿಕೂಟವು ಒಟ್ಟು 140 ಸ್ಥಾನಗಳಲ್ಲಿ 102 ಸ್ಥಾನಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ಪಕ್ಷವೊಂದೇ 63 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಆದರೆ, ಈ ಅಭೂತಪೂರ್ವ ಯಶಸ್ಸಿನ ನಡುವೆಯೂ ಕೇರಳಂಗೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್ ಪಾಳಯದಲ್ಲಿ ಇನ್ನೂ ಉತ್ತರ ಸಿಕ್ಕಿಲ್ಲ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ವಿ.ಡಿ. ಸತೀಶನ್, ಕೆ.ಸಿ. ವೇಣುಗೋಪಾಲ ಮತ್ತು ರಮೇಶ ಚೆನ್ನಿತ್ತಲ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಹೈಕಮಾಂಡಿನ ಅಂತಿಮ ತೀರ್ಮಾನಕ್ಕಾಗಿ ಕಾಯಲಾಗುತ್ತಿದೆ. ಈ ನಡುವೆ, ತಮ್ಮ ನೆಚ್ಚಿನ ನಾಯಕರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಬೆಂಬಲಿಗರು ರಾಜ್ಯಾದ್ಯಂತ ಪೋಸ್ಟರ್ ಮತ್ತು ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸುತ್ತಿರುವುದು ಪಕ್ಷದ ಒಳಗೆ ಗೊಂದಲಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಆಲಪ್ಪುಳ ಸಂಸದ ಕೆ.ಸಿ. ವೇಣುಗೋಪಾಲ ಮತ್ತು ಅನುಭವಿ ನಾಯಕ ರಮೇಶ್ ಚೆನ್ನಿತ್ತಲ ಅವರು ಈ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಪರವೂರು ಕ್ಷೇತ್ರದಿಂದ ಗೆದ್ದಿರುವ ಹಿರಿಯ ನಾಯಕ ವಿ.ಡಿ. ಸತೀಶನ್ ಅವರಿಗೆ ಹೆಚ್ಚಿನ ಜನಬೆಂಬಲವಿದೆ ಎನ್ನಲಾಗುತ್ತಿದೆ. ಎಡರಂಗದ ವಿರುದ್ಧದ ಚುರುಕಾದ ವಾಗ್ದಾಳಿ ಮತ್ತು ಕಾಂಗ್ರೆಸ್‌ನಲ್ಲಿ ತಂದಿರುವ ಸಾಂಸ್ಥಿಕ ಬದಲಾವಣೆಗಳು ಸತೀಶನ್ ಅವರ ಪರವಾಗಿ ಕೆಲಸ ಮಾಡುತ್ತಿವೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸನ್ನಿ ಜೋಸೆಫ್ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ಹೈಕಮಾಂಡ್ ಶೀಘ್ರದಲ್ಲೇ ತನ್ನ ನಿರ್ಧಾರವನ್ನು ಪ್ರಕಟಿಸಲಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೈತ್ರಿಕೂಟದ ಪ್ರಮುಖ ಪಕ್ಷವಾದ ಮುಸ್ಲಿಂ ಲೀಗ್ 22 ಸ್ಥಾನಗಳನ್ನು ಪಡೆದಿದ್ದರೆ, ಉಳಿದ ಮಿತ್ರಪಕ್ಷಗಳು ಜಯದಲ್ಲಿ ಪ್ರಮುಖ ಪಾತ್ರ ವಹಿಸಿವೆ. ಸದ್ಯ ಎಲ್ಲರ ಕಣ್ಣು ಹೈಕಮಾಂಡ್ ಪ್ರಕಟಿಸಲಿರುವ ಹೆಸರಿನ ಮೇಲಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ