Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸವದಿಯವರ ಆಪ್ತನನ್ನು ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ

ಖಿಳೇಗಾಂವ ಕಾಂಗ್ರೆಸ್‌ ಮುಖಂಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಣ್ಣಪ್ಪ ಬಸಪ್ಪ ನಿಂಬಾಳ (58) ಅವರನ್ನು ಬುಧವಾರ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಅಣ್ಣಪ್ಪ ಬುಧವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮರಳುತ್ತಿದ್ದ ವೇಳೆ ಆರು ಮಂದಿ ಮುಸುಕುಧಾರಿಗಳ ಗುಂಪು ಅವರ ಮೇಲೆ ದಾಳಿ ಮಾಡಿದೆ. ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಅಥಣಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಅವರು ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ ಅವರ ಆಪ್ತರು. ಕೊಲೆ ವಿಷಯ ತಿಳಿದು ಶಾಸಕ ಸವದಿ ಆಸ್ಪತ್ರೆಗೆ ಭೇಟಿ ನೀಡಿದರು. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಥಣಿ ಪೊಲೀಸರು ತಿಳಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ಮನೆ ಮಾಡಿದ್ದು, ಪೊಲೀಸ್‌ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಬೆಳಗಾವಿ : ಕಾಂಗ್ರೆಸ್‌ ಮುಖಂಡರೊಬ್ಬರನ್ನು ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ಶಾಸಕ ಲಕ್ಷ್ಮಣ ಸವದಿಯವರ ಆಪ್ತ, ಸ್ಥಳೀಯ ಕಾಂಗ್ರೆಸ್‌ ಮುಖಂಡ ಅಣ್ಣಪ್ಪ ಬಸಣ್ಣ ನಿಂಬಾಳ (58) ಹತ್ಯೆಗೀಡಾಗಿದ್ದಾರೆ.

ಅಥಣಿ ತಾಲೂಕಿನ ಖೀಳೆಗಾಂವನಲ್ಲಿ ಅಣ್ಣಪ್ಪ ಬಸಣ್ಣ ನಿಂಬಾಳ ಅವರ ಮೇಲೆ ಆರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇವರ ಮೇಲೆ ಮಾರಕಾಸ್ತ್ರಗಳಿಂದ ಹಠಾತ್ತನೆ ದಾಳಿ ನಡೆಸಿದ ಕಾರಣ ಅಣ್ಣಪ್ಪ ಬಸಣ್ಣ ನಿಂಬಾಳ ನಿರುತ್ತರರಾಗಿದ್ದಾರೆ. ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಖಿಳೆಗಾಂವ ಗ್ರಾಮಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಅಣ್ಣಪ್ಪ ಬಸಣ್ಣ ನಿಂಬಾಳ ಅವರು ಖಿಳೇಗಾಂವ ಗ್ರಾಮದ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಶಾಸಕ ಲಕ್ಷ್ಮಣ ಸವದಿ ಅವರ ಆಪ್ತರಾಗಿದ್ದಾರೆ. ಸ್ಥಳೀಯವಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿಯೂ ಇವರು ಹೆಚ್ಚು ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ರಾಜಕೀಯ ದ್ವೇಷದಿಂದಾಗಿ ಇವರನ್ನು ಹತ್ಯೆ ಮಾಡಲಾಗಿದೆ ಎಂದು ಗ್ರಾಮದ ಮೂಲಗಳು ತಿಳಿಸಿವೆ. ಅಥಣಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಖಿಳೇಗಾಂವ-ಅಥಣಿ ರಸ್ತೆಯ ಬಳಿ ಅಣ್ಣಪ್ಪ ಬಸಣ್ಣ ನಿಂಬಾಳ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿದ ಪರಿಣಾಮ ಭಾರಿ ಪ್ರಮಾಣದ ರಕ್ತಸ್ರಾವ ಉಂಟಾಗಿದೆ. ಇದರಿಂದಾಗಿ ಅಣ್ಣಪ್ಪ ಬಸಣ್ಣ ನಿಂಬಾಳ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?