Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

10 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ರಾಯ್ಪುರ: ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 10 ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಸುಕ್ಮಾ ಜಿಲ್ಲೆಯಲ್ಲಿ ಈ ಎನ್‌ಕೌಂಟರ್‌ ನಡೆದಿದ್ದು, ಈ ವೇಳೆ ಹತ ನಕ್ಸಲರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ನಕ್ಸಲೀಯರು ಒಡಿಶಾ ಮೂಲಕ ಛತ್ತೀಸ್‌ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ಆರಂಭಿಸಿದೆ. ಇಂದು, ಶುಕ್ರವಾರ ಬೆಳ್ಳಂ ಬೆಳಗ್ಗೆ ಸುಕ್ಮಾ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ 10 ಮಾವೋವಾದಿಗಳನ್ನು ಭದ್ರತಾ ಪಡೆ ಎನ್‌ಕೌಂಟರ್‌ ಮಾಡಿದೆ ಎಂದು ಬಸ್ತಾರ್ ಇನ್ಸ್‌ಪೆಕ್ಟರ್-ಜನರಲ್ ಆಫ್ ಪೋಲೀಸ್ ಪಿ ಸುಂದರರಾಜ ತಿಳಿಸಿದ್ದಾರೆ.

ಕಳೆದ ತಿಂಗಳು ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 30ಕ್ಕೂ ಅಧಿಕ ಮಾವೋವಾದಿಗಳು ಹತರಾಗಿದ್ದರು. ಅಕ್ಟೋಬರ್‌ 4 ರಂದು ಛತ್ತೀಸ್‌ಗಢದ ನಾರಾಯಣಪುರ- ದಾಂತೇವಾಡ ಗಡಿ ಅರಣ್ಯ ಪ್ರದೇಶದಲ್ಲಿ ದಾಳಿ ಮಾಡಲು ಸಂಚು ರೂಪಿಸುತ್ತಿದ್ದ 30 ಮಾವೋವಾದಿ ನಕ್ಸಲರನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿದೆ. ಆಗ ಎಕೆ ಸರಣಿ ರೈಫಲ್‌ಗಳು ಮತ್ತು ಇತರ ಶಸ್ತ್ರಾಸ್ತ್ರಗಳು ಸೇರಿದಂತೆ ಹಲವಾರು ಅಸಾಲ್ಟ್ ರೈಫಲ್‌ಗಳನ್ನು ನಕಲ್ಸರ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ