Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರೌಢಶಾಲಾ ಶಿಕ್ಷಕರಿಗೆ ಸಮೀಕ್ಷೆ ಹೊಣೆ ತೀವ್ರ ಆಕ್ಷೇಪ

ಬೆಳಗಾವಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಮ್ಮನ್ನು ನಿಯೋಜನೆ ಮಾಡಿರುವ ಬಗ್ಗೆ ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿರುವ ಘಟನೆ ನಡೆದಿದೆ.

ಬೆಳಗಾವಿ ನಗರದ ಸರಕಾರಿ ಅನುದಾನಿತ ಪ್ರೌಢ ಶಾಲೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗೆ ಸಮೀಕ್ಷೆ ಬಗ್ಗೆ ಕೆಪಿಟಿಸಿಎಲ್ ಭವನದಲ್ಲಿ ಸೋಮವಾರದಂದು ತರಬೇತಿ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆ ಕುರಿತು ನಮಗೆ ಮೊದಲೇ ಮಾಹಿತಿ ಕೊಟ್ಟಿಲ್ಲ‌ ಈಗ ಏಕಾಏಕಿ ತರಬೇತಿ ನೀಡಿ ಮಂಗಳವಾರದಿಂದಲೇ ಸಮೀಕ್ಷೆ ಮಾಡುವಂತೆ ಒತ್ತಡ ಹೇರುವುದು ಸರಿಯಲ್ಲ. ಸಮೀಕ್ಷೆ ಬಗ್ಗೆ ಮೊದಲೇ ತಿಳಿಸಿದ್ದರೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೆವು. ಆದರೆ ಈಗ ಯಾವುದೇ ಮಾಹಿತಿ ನೀಡದೆ ಪ್ರೌಢಶಾಲೆಯ ಶಿಕ್ಷಕರನ್ನು ಸಮೀಕ್ಷೆಗೆ ನಿಯೋಜಿಸಿರುವುದು ಸರಿಯಲ್ಲ ಎಂದು ಶಿಕ್ಷಕರು ಹಾಗೂ ಸಿಬ್ಬಂದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಶಿಕ್ಷಕರಿಗೆ ಕಿರಿಕಿರಿ ತಂದ ಸಾಮಾಜಿಕ ಗಣತಿ ಕಾರ್ಯ : ವಿನಾಯಿತಿ ಕೊಡಲೇ ಬೇಕಿದ್ದರೂ ಮತ್ತೆ ನೇಮಕ ಮಾಡಿದ ಆಡಳಿತ:

ಹಿಂದುಳಿದ ವರ್ಗಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಗೆ ಅನುದಾನಿತ ಪ್ರೌಢಶಾಲೆಯ ಶಿಕ್ಷಕರಿಗೆ ಗಣತಿ ಕಾರ್ಯಕ್ಕೆ ನಿಯೋಜಿಸುವ ಯಾದಿಯಲ್ಲಿ ಹೆಸರುಗಳು ಬಂದಿರುತ್ತದೆ. ಆದರೆ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ದಸರಾ ರಜಾ ಅವಧಿಯಲ್ಲಿ ವಿಶೇಷ ತರಗತಿಗಳನ್ನು ಮಾಡಲು ಧಾರವಾಡ ಆಯುಕ್ತರ ಕಾರ್ಯಾಲಯ ಸೂಚಿಸಿರುವುದರಿಂದ, ಆಯಾ ಶಾಲೆಯ ಆಡಳಿತ ಮಂಡಳಿಯವರ ಆದೇಶವಿರುವುದರಿಂದ ಹಾಗೂ ಶಾಲೆಯ ಫಲಿತಾಂಶ ಕಡಿಮೆ ಬಂದಿರುವ ಪಟ್ಟಿಯಲ್ಲಿ ಇರುವುದರಿಂದ ಪ್ರೌಢಶಾಲೆ ಶಿಕ್ಷಕರು ವಿಶೇಷ ತರಗತಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇನ್ನು ಉತ್ತಮ ಫಲಿತಾಂಶ ಕೊಟ್ಟ ಶಾಲಾ ಶಿಕ್ಷಕರಿಗೆ ಈ ಆದೇಶ ಕಿರಿಕಿರಿ ಉಂಟು ಮಾಡಿದೆ. ಮತ್ತು 9 ಮತ್ತು 10 ನೇ ತರಗತಿ ಶಿಕ್ಷಕರನ್ನು ಹೊರತುಪಡಿಸಿ ಇನ್ನುಳಿದ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸಬೇಕೆಂಬ ಜಿಲ್ಲಾಧಿಕಾರಿಗಳವರ ಆದೇಶವಿರುವುದರಿಂದ ಸದರಿ ಗಣತಿ ಕಾರ್ಯದಿಂದ ನಮ್ಮ ಶಾಲಾ ಶಿಕ್ಷಕರಿಗೆ ವಿನಾಯಿತಿ ನೀಡಬೇಕಿದ್ದರೂ ಮತ್ತೆ ನೇಮಿಸಿದ್ದಾರೆ. ಎಸ್ ಎಸ್ ಎಲ್ ಸಿ ಫಾರ್ಮ್ ತುಂಬುವಿಕೆ, ಎನ್ ಎನ್ ಎಂಎಸ್ , ಎಲ್ ಬಿಎ ಕಾರ್ಯ ಮುಂತಾದ ಹೊರೆಯ ನಡುವೆ ಈ ಆದೇಶ ನೋಡಿ ಶಿಕ್ಷಕರ ಹೃದಯ ನಿಂತು ಹೋಗುವ ಕ್ಷಣ ಎದುರಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು