Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹಾತ್ಮಾಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ

 

ಬೆಂಗಳೂರು: ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾಗಾಂಧಿಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನವರಿ 30 , 1948 ರಂದು ಮತಾಂಧನಾಗಿದ್ದ ನಾಥುರಾಮ್ ಗೋಡ್ಸೆ ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ ದಿನ. ಗಾಂಧೀಜಿಯವರು ಇಹಲೋಕವನ್ನು ತ್ಯಜಿಸಿದ್ದರೂ, ಅವರ ಮೌಲ್ಯಗಳನ್ನು ಕೊನೆಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸತ್ಯ, ಅಸಿಂಹೆಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ವ್ಯಕ್ತಿ. ಅಹಿಂಸಾ ಹೋರಾಟದ ನಾಯಕತ್ವ ವಹಿಸಿದ್ದರು. ಅವರು ಮೊದಲು ಭಾರತಕ್ಕೆ ಬಂದು ತಳಮಟ್ಟದಿಂದ ದೇಶವನ್ನು ಅರಿಯಲು ಪ್ರಯತ್ನಿಸಿ, ನಂತರ ದೇಶದ ಜನರನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸಿದರು ಎಂದರು.

*ಗಾಂಧಿ ಭಾರತ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ*

1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಜನವರಿ 21 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಿ, ನಂತರ ಜೈಬಾಪು, ಜೈಭೀಮ, ಜೈ ಸಂವಿಧಾನ ಘೋಷವಾಕ್ಯದೊಂದಿಗೆ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು. ಭಾರತ ದೇಶ ಹಳ್ಳಿಗಳ ದೇಶ, ಹಳ್ಳಿಗಳ ಅಭಿವೃದ್ಧಿಗಳ ಮೂಲಕ ದೇಶ ಅಭಿವೃದ್ಧಿ ಸಾಧ್ಯವೆಂದು ಪ್ರತಿಪಾದಿಸಿದ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಜೀವ ತುಂಬಿದ್ದರು. ಗ್ರಾಮಗಳ ಸ್ವಾವಲಂಬನೆಯಿಂದ , ದೇಶ ಸ್ವಾವಲಂಬನೆಯಾಗುತ್ತದೆ. ಗುಡಿಕೈಗಾರಿಕೆಗಳು ಗ್ರಾಮಗಳ ಆರ್ಥಿಕತೆಯ ತಳಹದಿಯಾಗಿದ್ದು, ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಈ ನಿಟ್ಟಿನಲ್ಲಿ ಗಾಂಧಿ ಭಾರತ ವನ್ನು ನಿರ್ಮಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

*ಕುಂಭಮೇಳದಲ್ಲಿ ಕನ್ನಡಿಗರ ರಕ್ಷಣೆಗೆ ಕ್ರಮ:*

ಪ್ರಯಾಗ್ ರಾಜ್ ನ ಕುಂಭಮೇಳದ ಕಾಲ್ತುಳಿತದ ದುರಂತದಲ್ಲಿ ನಾಲ್ವರು ಕನ್ನಡಿಗರು ಮೃತಪಟ್ಟಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಮಾಹಿತಿ ದೃಢಪಟ್ಟಿದೆ ಹಾಗೂ ಗಾಯಗೊಂಡವರನ್ನು ಕರೆತರಲು ಏರ್ ಆ್ಯಂಬುಲೆನ್ಸ್ ವ್ಯವಸ್ಥೆಗೊಳಿಸಲಾಗಿದ್ದು, ಬೆಳಗಾವಿಯ ಹಿರಿಯ ಅಧಿಕಾರಿಗಳು ಅವರನ್ನು ಕರೆತರಲಿದ್ದಾರೆ. ಜಿಲ್ಲಾ ಸಚಿವರು ತೆಗೆದುಕೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು