Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದಂತೆ ಭರ್ತಿ ಮಾಡಿರುವ ಗಣತಿ ನಮೂನೆಗಳನ್ನು ಸಲ್ಲಿಸುವ ಅವಧಿಯನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಕಾರ್ಯ ಪ್ರಗತಿಯಲ್ಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ಹಾಗೂ ದಾಖಲೆ ಸಂಗ್ರಹಿಸುವ ಕಾರ್ಯ ಜೂನ್ 30ರಂದು ಆರಂಭವಾಗಿದ್ದು, ಆಗಸ್ಟ್ 17ರವರೆಗೆ ನಡೆಯಲಿದೆ. ಈ ಹಿಂದೆ ಆಗಸ್ಟ್ 8ರವರೆಗೆ ಅವಕಾಶ ನೀಡಲಾಗಿತ್ತು.

ಪರಿಷ್ಕೃತ ವೇಳಾಪಟ್ಟಿಯಂತೆ, ಮತಗಟ್ಟೆಗಳ ಮರುಜೋಡಣೆ ಹಾಗೂ ಮರುಹೊಂದಾಣಿಕೆ ಕಾರ್ಯವನ್ನು ಆಗಸ್ಟ್ 17ರಂದು ಪೂರ್ಣಗೊಳಿಸಲಾಗುವುದು. ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಪ್ರಕಟಿಸಲಾಗುತ್ತದೆ.

ಇದಾದ ಬಳಿಕ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಯನ್ನು ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ ನಡೆಸಲಾಗುವುದು. 

ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ