Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತೀವ್ರ ಕುತೂಹಲ : ಜೋಕರ್ಸ್ ಪಟ್ಟ ಅಳಿಸಿ ಚೊಚ್ಚಲ ಚಾಂಪಿಯನ್ ಶಿಪ್ ಪಡೆಯುವತ್ತ ದಕ್ಷಿಣ ಆಫ್ರಿಕಾ ದಾಪುಗಾಲು

ಲಾರ್ಡ್ಸ್ : ಕ್ರಿಕೆಟ್ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಲಾರ್ಡ್ಸ್ ಇದೀಗ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಮತ್ತು ನಿರ್ಣಾಯಕ ಸಂದರ್ಭದಲ್ಲಿ ಸೋಲು ಅನುಭವಿಸಿ ಚೋಕರ್ಸ್ ಎಂದೇ ಕುಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾ ನಡುವೆ ನಡೆದಿರುವ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ನಲ್ಲಿ ಗೋಚರಿಸಿವೆ.

ದಕ್ಷಿಣ ಆಫ್ರಿಕಾದ ಟಿ20 ಸ್ಪೆಷಲಿಸ್ಟ್ ಹಾಗೂ ನಾಯಕ ಭರ್ಜರಿ ಆಟವಾಡುತ್ತಿದ್ದಾರೆ. ಇವರ ಬ್ಯಾಟಿಂಗ್ ವೈಭವ ಗಮನಿಸಿದರೆ ಇವರಿಬ್ಬರೇ ದಕ್ಷಿಣ ಆಫ್ರಿಕಾ ತಂಡವನ್ನು ಗೆಲುವಿನ ಮೆಟ್ಟಿಲು ತಲುಪಿಸಬಹುದು ಎಂಬ ಸಾಧ್ಯತೆ ದಟ್ಟವಾಗಿದೆ. ಇದುವರೆಗೆ ದಕ್ಷಿಣ ಆಫ್ರಿಕಾ ಪ್ರಮುಖ ಕ್ರಿಕೆಟ್ ಟೂರ್ನಿಗಳಲ್ಲಿ ನಿರ್ಣಾಯಕವಾದ ಸಂದರ್ಭದಲ್ಲಿ ಸೋತು ಹೊರಬಿದ್ದು, ನಗೆ ಪಾಟಲಿಗೆ ಗುರಿಯಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಈ ಕುಖ್ಯಾತಿಯಿಂದ ಹೊರ ಬರುವಂತಿದೆ. ದಕ್ಷಿಣ ಆಫ್ರಿಕಾ ಇಂದು ಟೆಸ್ಟ್ ಚಾಂಪಿಯನ್ ಶಿಪ್ ಆಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು ಆ ದೇಶದ ಪಾಲಿಗೆ ಇಂದು ಶನಿವಾರ ಶುಕ್ರ ದೆಸೆಯಾಗುವ ಸಾಧ್ಯತೆ ಇದೆ.

ಸತತ ಎರಡನೇ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ ಪಟ್ಟಕ್ಕೇರುವ ಆಸ್ಟ್ರೇಲಿಯಾ ತಂಡದ ಕನಸಿಗೆ ದಕ್ಷಿಣ ಆಫ್ರಿಕಾದ ಏಡನ್ ಮರ್ಕರಂ ಅಡ್ಡಿಯಾದರು. ಅತ್ಯಂತ ಸುಂದರ ಶತಕ ಬಾರಿಸಿದ ಮರ್ಕರಂ ತಮ್ಮ ತಂಡವನ್ನು ಗೆಲುವಿನ ಸನಿಹ ತಂದು ನಿಲ್ಲಿಸಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಬೀಸಾಟಕ್ಕೆ ಹೆಸರಾದ ಬ್ಯಾಟ‌ರ್ ( ಮರ್ಕರಂ ಅವರು 102; 1592, 4x11) ತಾವು ಟೆಸ್ಟ್ ಕ್ರಿಕೆಟ್‌ಗೂ ಸೈ ಎಂಬುದನ್ನು ಸಾಬೀತು ಮಾಡಿದರು. ಲಾರ್ಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಜಯಿಸಲು ದಕ್ಷಿಣ ಆಫ್ರಿಕಾ ತಂಡಕ್ಕೆ 69 ರನ್‌ಗಳಷ್ಟೇ ಬೇಕಿವೆ. ಅದೇ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾವು ಗೆಲ್ಲಬೇಕೆಂದರೆ ಇನ್ನೂ 8 ವಿಕೆಟ್ ಕಬಳಿಸಬೇಕು.
ಇಷ್ಟು ವಿಕೆಟ್‌ಗಳನ್ನು ಗಳಿಸಿ ದಕ್ಷಿಣ ಆಫ್ರಿಕಾವನ್ನು ತಡೆಯಬೇಕು.

ಪಂದ್ಯದ ಮೂರನೇ ದಿನವಾದ ಶುಕ್ರವಾರ ಆಸ್ಟ್ರೇಲಿಯಾ ತಂಡವು ಒಡ್ಡಿದ 282 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ದಿನದಾಟದ ಕೊನೆಯಲ್ಲಿ 54 ಓವರ್‌ಗಳಲ್ಲಿ 2 ವಿಕೆಟ್‌ಗಳಿಗೆ 213 ರನ್ ಗಳಿಸಿತು. ಮರ್ಕರಂ ಮತ್ತು ನಾಯಕ ತೆಂಬಾ ಬವುಮಾ (ಬ್ಯಾಟಿಂಗ್ 60 ) ಅವರು ಮುರಿಯದ ಮೂರನೇ ವಿಕೆಟ್ ಜೊತೆಯಾಟದಲ್ಲಿ ಸೇರಿಸಿದ 143 ರನ್‌ಗಳಿಂದಾಗಿ ತಂಡವು ಗೆಲುವಿನ ಹಾದಿಯಲ್ಲಿದೆ.

ಬಾಲಂಗೋಚಿ ಬ್ಯಾಟ‌ರ್ ಮಿಚೆಲ್
ಸ್ಟಾರ್ಕ್ (ಅಜೇಯ 58; 136ಎಸೆತ) ಅವರ ವಿರೋಚಿತ ಬ್ಯಾಟಿಂಗ್‌ನಿಂದಾಗಿ ಆಸ್ಟ್ರೇಲಿಯಾ ತಂಡವು ಎರಡನೇ ಇನಿಂಗ್ಸ್‌ನಲ್ಲಿ 65 ಓವರ್ ಗಳಲ್ಲಿ 207 ರನ್ ಗಳಿಸಿತು. ಮೊದಲ ಇನಿಂಗ್ಸ್‌ನಲ್ಲಿ ತಂಡವು 74 ರನ್‌ಗಳ ಮುನ್ನಡೆ ಸಾಧಿಸಿತ್ತು. ಇದರಿಂದಾಗಿ ಗೆಲುವಿನ ವಿಶ್ವಾಸದಲ್ಲಿತ್ತು.

ಅದಕ್ಕೆ ತಕ್ಕಂತೆ ಸ್ಟಾರ್ಕ್ ಅವರು ಬೌಲಿಂಗ್‌ನಲ್ಲಿಯೂ ಮಿಂಚಿದರು. ರಿಯಾನ್ ರಿಕೆಲ್ಟನ್ ಮತ್ತು ವಿಯಾನ್ ಮಲ್ಲ‌ರ್ ವಿಕೆಟ್‌ಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡರು. ಆಗ ದಕ್ಷಿಣ ಆಫ್ರಿಕಾ ತಂಡವು 70 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಆತಂಕದಲ್ಲಿತ್ತು.

ಈ ಹಂತದಲ್ಲಿ ಆತ್ಮವಿಶ್ವಾಸದಿಂದ ಆಡುತ್ತಿದ್ದ ಮರ್ಕರಂ ಅವರೊಂದಿಗೆ ಸೇರಿಕೊಂಡರು. ಇಬ್ಬರೂ ಸೇರಿ ಬೌಲರ್‌ಗಳಿಗೆ ಬೆವರಿಳಿಸಿದರು. ಸ್ಟಾರ್ಕ್, ಪ್ಯಾಟ್ ಕಮಿನ್ಸ್ ಹಾಗೂ ಸ್ಪಿನ್ನರ್ ನೇಥನ್ ಲಯನ್ ಅವರ ಉತ್ತಮ ಎಸೆತಗಳಿಗೆ ತಕ್ಕ ಉತ್ತರ ನೀಡುವಲ್ಲಿ ಯಶಸ್ವಿಯಾದರು.

ಒಟ್ಟಾರೆ ಇಡೀ ವಿಶ್ವದ ಕ್ರಿಕೆಟ್ ಅಭಿಮಾನಿಗಳು ಈಗ ಕ್ರಿಕೆಟ್ ಕಾಶಿಯತ್ತ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದಾರೆ ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ಅನ್ನು ತನ್ನ ಮುಡಿಗೇರಿಸಿಕೊಳ್ಳುತ್ತದ ಎನ್ನುವುದನ್ನು ಕಾತರದಿಂದ ಕಾಯುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ