Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ಯಾಸೆಲ್‌ರಾಕ್-ಕುಲೆಮ್ ಜೋಡಿ ಮಾರ್ಗಕ್ಕೆ ಸಮೀಕ್ಷೆ

 

ಬೆಳಗಾವಿ : ಪಶ್ಚಿಮ ಘಟ್ಟದಲ್ಲಿ ನಿರಂತರ ಭೂಕುಸಿತ ಆಗುತ್ತಿದ್ದರೂ ಹಾಸನ-ಮಂಗಳೂರು ನಡುವೆ ಹೊಸ ರೈಲು ಮಾರ್ಗ ನಿರ್ಮಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಅಂತಿಮ ಸ್ಥಳ ಸಮೀಕ್ಷೆ (ಎಫ್‌ಎಲ್‌ಎಸ್) ನಡೆಸಲು ಟೆಂಡ‌ರ್ ಕರೆಯಲಾಗಿದೆ.

ಹಾಸನ ಮತ್ತು ಮಂಗಳೂರು ನಡುವಿನ 247 ಕಿ.ಮೀ. ಉದ್ದದ ಹೊಸ ಮಾರ್ಗದ (ಸಿಂಗಲ್/ಡಬಲ್) ಹಾಗೂ ಕ್ಯಾಸೆಲ್‌ರಾಕ್-ಕುಲೆಮ್ ನಡುವಿನ 72 ಕಿ.ಮೀ. ಹೊಸ ಜೋಡಿ ಮಾರ್ಗ ನಿರ್ಮಾಣದ ಸ್ಥಳ ಸಮೀಕ್ಷೆಗೆ ₹21.36 ಕೋಟಿ ಮೊತ್ತದ ಟೆಂಡ‌ರ್ ಅನ್ನು ಜ.4ರಂದು ಆಹ್ವಾನಿಸಲಾಗಿದೆ. ಜ.29ರೊಳಗೆ ಪ್ರಾರಂಭಿಕ ಬಿಡ್ ಹಾಗೂ ಫೆ.12ರೊಳಗೆ ಪರಿಷ್ಕೃತ ಬಿಡ್ ಸಲ್ಲಿಸಲು ಅವಕಾಶ ನೀಡಲಾಗಿದೆ.

ಹಾಸನ-ಮಂಗಳೂರು ಹೊಸ ಮಾರ್ಗಕ್ಕೆ ವಿವರವಾದ ಯೋಜನಾ ವರದಿ ತಯಾರಿಕೆ, ಭೂ-ತಾಂತ್ರಿಕ ತನಿಖೆ, ಸಿಗ್ನಲ್‌ ಕೆಲಸಗಳು ಮತ್ತು ಹೊಸ ಸಿಂಗಲ್/ಡಬಲ್ ಮಾರ್ಗ ನಿರ್ಮಾಣದ ಬಗ್ಗೆ ಒಂದು ವರ್ಷದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ತಿಳಿಸಲಾಗಿದೆ.

ಸದ್ಯದ ಮಾರ್ಗದಲ್ಲಿ ಹಾಸನ-ಮಂಗಳೂರು ನಡುವಿನ ಅಂತರ 189 ಕಿ.ಮೀ. ಇದೆ. ಹೊಸ ಮಾರ್ಗ ನಿರ್ಮಾಣ ಆದರೆ ಇದು 247ಕಿ.ಮೀ. ಆಗಬಹುದು ಎಂದು ಅಂದಾಜಿಸಲಾಗಿದೆ.

ಹಾಸನ-ಮಂಗಳೂರು ಮಾರ್ಗದ ಸಾಮರ್ಥ್ಯ ಹೆಚ್ಚಿಸುವಂತೆ ಒತ್ತಾಯಿಸುತ್ತಲೇ ಬಂದಿದ್ದೇನೆ. ರೈಲ್ವೆ ಸಚಿವಾಲಯವು ಈಗಾಗಲೇ ಅಸ್ತಿತ್ವದಲ್ಲಿರುವ ಮಾರ್ಗದ ದ್ವಿಪಥ ಮತ್ತು ವಿದ್ಯುದೀಕರಣ ಮಂಜೂರು ಮಾಡಿದ್ದರೂ ಇದು ಬಹುತೇಕ ಅಸಾಧ್ಯ. ಸಚಿವಾಲಯವು ಸಂಪೂರ್ಣವಾಗಿ ಭಿನ್ನವಾದ ಹೊಸ ಮಾರ್ಗದಲ್ಲಿ ಕೆಲಸ ಮಾಡಬೇಕು. ಅದಕ್ಕಾಗಿ ಸಮೀಕ್ಷೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದೆ' ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ತಿಳಿಸಿದರು.

'ಶಿರಾಡಿ, ಚಾರ್ಮಾಡಿ, ಸಂಪಾಜೆ ಘಾಟಿ ರಸ್ತೆಗಳು ಹಾಗೂ ಪಶ್ಚಿಮ ಘಟ್ಟದ ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸುತ್ತಿದ್ದು, ವಾಹನ ಸಂಚಾರ ಮತ್ತು ರೈಲು ಸಂಚಾರ ಆಗಾಗ ಸ್ಥಗಿತವಾಗುತ್ತಿದೆ. ಕರಾವಳಿ ಹಾಗೂ ಬೆಂಗಳೂರು ನಡುವಿನ ತಡೆರಹಿತ ಸಂಪರ್ಕಕ್ಕೆ ತೊಂದರೆ ಆಗುತ್ತಿದೆ. ಇದು ವಾಣಿಜ್ಯ ವಹಿವಾಟಿನ ಮೇಲೂ ಪರಿಣಾಮ ಬೀರುತ್ತಿದೆ' ಎನ್ನುವ ಮಾತು ಕರಾವಳಿ ಭಾಗದ ವಾಣಿಜ್ಯೋದ್ಯಮಿಗಳದ್ದಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ