Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕ್ಷೇತ್ರ ಬದಲು : ದಿಢೀರ್ ನಿರ್ಧಾರ ಬದಲಿಸಿದ ಸ್ವಾಮೀಜಿ !

 

ಬೆಳಗಾವಿ : ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದ ಕಿತ್ತೂರು ದೇಗುಲ ಹಳ್ಳಿ-ಅಂಬಡಗಟ್ಟಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಇದೀಗ ಕ್ಷೇತ್ರ ಬದಲಿಸುವ ಕೈಗೊಂಡಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಎಂಟು ಮತಕ್ಷೇತ್ರದಲ್ಲಿ ನನ್ನ ಭಕ್ತರಿದ್ದಾರೆ. ಅವರ ಒತ್ತಾಯದಿಂದ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸುವುದಾಗಿ ಸ್ವಾಮೀಜಿ ಹೇಳಿದ್ದರು. ಇದೀಗ ದಿಢೀರ್ ತಮ್ಮ ನಿರ್ಧಾರ ಬದಲಿಸಿರುವ ಸ್ವಾಮೀಜಿ, ಕಿತ್ತೂರು ಮತಕ್ಷೇತ್ರ ಉತ್ತರ ಕನ್ನಡ ಲೋಕಸಭಾ ವ್ಯಾಪ್ತಿಗೆ ಬರುವುದರಿಂದ ನಾನು ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಮಠದ ಸ್ವಾಮೀಜಿಯಾಗಿ ಸೇವೆ ಸಲ್ಲಿಸುತ್ತಿರುವ ನಾನು ಸಮಾಜ ಸೇವೆ ಮಾಡಬೇಕು. ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಕಣಕ್ಕಿಳಿಯುತ್ತಿದ್ದೇನೆ. ಇದು ನನ್ನ ವೈಯಕ್ತಿಕ ಹಾಗೂ ಭಕ್ತರ ಇಚ್ಛೆ ಆಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಿತ್ತೂರು ಹಾಗೂ ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಭೆ ನಡೆಸಲಾಗಿದ್ದು, ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಜನ ಸದಾ ನನ್ನೊಂದಿಗೆ ಇದ್ದು ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುತ್ತಿದ್ದಾರೆ. ಆದರೆ, ನನಗೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಒಂದೇ. ಜನಸೇವೆ ಮಾಡುವ ಉದ್ದೇಶದಿಂದ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ ಎಂದು ಅವರು ತಿಳಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು