Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಪಸಿ : ವಿವೇಕಾನಂದ, ಬೋಸ್ ಜನ್ಮದಿನಾಚರಣೆ

 

ಬೆಳಗಾವಿ : ತಪಸಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯೋತ್ಸವವನ್ನು ಶ್ರೀ ರಾಮಕೃಷ್ಣ ಮಿಷನ್ ಬೆಳಗಾವಿ ಸ್ವಾಮೀಜಿ ಪರಮ ಪೂಜ್ಯ ಮೋಕ್ಷಾತ್ಮಾನಂದ ಜೀ ಮಹಾರಾಜ್ ಅವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಶುಕ್ರವಾರ ಶ್ರೀ ಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪರಮಪೂಜ್ಯ ಸ್ವಾಮೀಜಿಯವರು ವಿದ್ಯಾರ್ಥಿಗಳನ್ನು ಕುರಿತು ಗುರಿ ಸಾಧಿಸಲು ಆಲೋಚನೆ,ಸಂಕಲ್ಪ,ಗಮನ ಇವುಗಳ ಪಾತ್ರ ತುಂಬಾ ಮುಖ್ಯ ಎಂದರು. ಮಹಾವಿದ್ಯಾಲಯದ ಪ್ರಾಂಶುಪಾಲ ಗೋವಿಂದ ಅವರು ತಮ್ಮ ಪ್ರಾಸ್ಥಾವಿಕ ನುಡಿಯಲ್ಲಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಆಲೋಚನೆಗಳು ಅಳವಡಿಸಿಕೊಳ್ಳಬೇಕೆಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಆರ್.ಆರ್‌.ನಾಡಗೌಡರ ಅವರು ಶ್ರೀಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟ್‌ನ ಉದ್ದೇಶಗಳಾದ ಸಾಯಿಮಂದಿರ, ಗೋಶಾಲೆ,ಸಾವಯವ ಕೃಷಿ, ಔಷಧಿ ಸಸ್ಯಗಳನ್ನು ಉಳಿಸಿ ಬೆಳೆಸುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಅಧ್ಯಯನ ಕೇಂದ್ರ ಸ್ಥಾಪನೆ ಕುರಿತು ಮಾತನಾಡಿ ಜೀವನದಲ್ಲಿ ಪ್ರಾಮಾಣಿಕತೆ ತುಂಬಾ ಮುಖ್ಯ ಎಂದರು.

ಉಪಾಧ್ಯಕ್ಷ ದುಂಡಪ್ಪ ಬೀರಗೌಡ್ರ ಕಾರ್ಯದರ್ಶಿ ಸಚಿನ್ ಬಾಗೋಜಿ ಖಜಾಂಚಿ ವಿನಾಯಕ ಪರವಿನಾಯ್ಕರ ಮತ್ತು ಟ್ರಸ್ಟ್ ಸದಸ್ಯರುಗಳಾದ ನಾಮದೇವ ಉಮರಾಣಿ, ಭೀಮಶಿ ಹುಲಕುಂದ, ಈರಣ್ಣ ಬೆಳವಿ,ರಮೇಶ ಬಿಎಲ್, ಸಲಹಾ ಮಂಡಳಿ ಸದಸ್ಯರಾದ ಯಲ್ಲಪ್ಪ ಮಿಚ್ಯಾಗೋಳ್, ಮಹೇಶ್ ಅಂತರಗಟ್ಟಿ ಮತ್ತು ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದ ಸರ್ವ ಸಿಬ್ಬಂದಿ ವರ್ಗದವರು ಮತ್ತು ತಾಲೂಕಾ ಪಂಚಾಯತಿಯ ವ್ಯವಸ್ಥಾಪಕ ಸಂಜು ಹುದ್ದಾರ ಅವರು ಉಪಸ್ಥಿತರಿದ್ದರು.
ಭೀಮಶಿ ಹುಲಕುಂದ ನಿರೂಪಿಸಿದರು ದುಂಡಪ್ಪ ಬೀರಗೌಡರ ಸ್ವಾಗತ ಮತ್ತು ಪರಿಚಯಿಸಿದರು.ಈರಣ್ಣ ಬೆಳವಿ ವಂದಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ