Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣಾ ತರಬೇತಿಗೆ ಚಕ್ಕರ್, ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

 

ದಾವಣಗೆರೆ : ಚುನಾವಣಾ ಮತಗಟ್ಟೆ ಮಟ್ಟದ ಅಧಿಕಾರಿ ಸಿಬ್ಬಂದಿಗಳಿಗೆ ಏಪ್ರಿಲ್ 8 ರಂದು ಚನ್ನಗಿರಿಯಲ್ಲಿ ಏರ್ಪಡಿಸಿದ ತರಬೇತಿ ಕಾರ್ಯಾಗಾರದಲ್ಲಿ ಬೆಳಿಗ್ಗೆ ಹಾಜರಾಗಿ ಮಧ್ಯಾಹ್ನ ತರಬೇತಿಗೆ ಹಾಜರಾಗದೆ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ಹೊರ ಹೋಗಿದ್ದು ಇದನ್ನು ಪ್ರಶ್ನಿಸಿದ ತಹಶೀಲ್ದಾರ್ ಅವರೊಂದಿಗೆ ಅನುಚಿತ ವರ್ತನೆ ಮಾಡಿದ ಚನ್ನಗಿರಿ ಎಸ್.ಕೆ.ಎಂ.ಎಸ್ ಮಿಲ್ಲತ್ ಪ್ರೌಢಶಾಲೆ ಸಹ ಶಿಕ್ಷಕ ಸೈಯದ್ ಸುಲ್ತಾನ್ ಅಹಮದ್ ಇವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಮತಗಟ್ಟೆ ಅಧ್ಯಕ್ಷ, ಸಹಾಯಕ ಅಧ್ಯಕ್ಷಾಧಿಕಾರಿ ಸಿಬ್ಬಂದಿಗಳಿಗೆ ಏಪ್ರಿಲ್ 8 ರಂದು ಮೊದಲ ಹಂತದ ತರಬೇತಿಯನ್ನು ಎಲ್ಲಾ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿಯಲ್ಲಿ ಶ್ರೀಶ್ರೀಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಬೇತಿ ನಡೆದಿರುತ್ತದೆ. ಬೆಳಿಗ್ಗೆ ತರಬೇತಿ ಮುಗಿದು ಮಧ್ಯಾಹ್ನ 3 ಗಂಟೆಗೆ ಕೊಠಡಿ ಸಂಖ್ಯೆ 10 ರಲ್ಲಿ ತರಬೇತಿ ಆರಂಭವಾಗಿತ್ತು. ಆದರೆ ಯಾವುದೇ ಅನುಮತಿ ಇಲ್ಲದೆ ತರಬೇತಿಗೆ ಹಾಜರಾದ ಅನ್ಯ ಮಹಿಳಾ ಸಿಬ್ಬಂದಿಯೊಂದಿಗೆ ತರಬೇತಿಯಿಂದ ಹೊರ ಹೋಗುತ್ತಿರುವಾಗ ಇದನ್ನು ಪ್ರಶ್ನಿಸಿದ ತಹಶೀಲ್ದಾರ್ ಅವರೊಂದಿಗೆ ಮಹಿಳಾ ಸಿಬ್ಬಂದಿ ಸಮ್ಮುಖದಲ್ಲಿಯೇ ಅಸಭ್ಯವಾಗಿ ವರ್ತಿಸಿದ್ದಾರೆ, ಜೊತೆಗೆ ಅನ್ಯ ಸಿಬ್ಬಂದಿಯವರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದು ಚುನಾವಣಾ ಪ್ರಾಧಿಕಾರಕ್ಕೆ ಮುಜುಗರ ಉಂಟು ಮಾಡಿರುತ್ತಾರೆ.
ಇದು ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 134 ರ ನಿಯಮ ಉಲ್ಲಂಘನೆ ಮತ್ತು ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮಾವಳಿ 1966 ಹಾಗೂ ತಿದ್ದುಪಡಿ ನಿಯಮಗಳು 2021 ರ ನಿಯಮ ಉಲ್ಲಂಘಿಸಿ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅಮಾನತು ಮಾಡಿ ಕೇಂದ್ರಸ್ಥಾನ ಬಿಡದಂತೆ ಆದೇಶಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು