Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಜನಿಕಾಂತ್‌ಗೆ ಬಿಜೆಪಿಯಿಂದ ತೆಲಂಗಾಣ ರಾಜ್ಯಪಾಲ ಹುದ್ದೆ ?

 

ಹೈದ್ರಾಬಾದ್ :
ತೆಲಂಗಾಣ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ, ಖ್ಯಾತ ನಟ ರಜನಿಕಾಂತ್‌ ಅವರನ್ನು ತೆಲಂಗಾಣದ ನೂತನ ರಾಜ್ಯಪಾಲರಾಗಿ ನೇಮಿಸುವ ಸಾಧ್ಯತೆ ಇದೆ ಎಂದು ಸುದ್ದಿಯೊಂದು ಭಾರೀ ಸದ್ದು ಮಾಡಿದೆ.

ತಮಿಳುನಾಡು ಮತ್ತು ತೆಲಂಗಾಣದಲ್ಲಿ ರಜನಿ ಬಹುದೊಡ್ಡ ಜನಬೆಂಬಲ ಹೊಂದಿದ್ದಾರೆ. ಇದನ್ನು ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯಪಾಲರಾಗುವಂತೆ ಬಿಜೆಪಿ ರಜನಿಗೆ ಆಫರ್‌ ನೀಡಿದೆ. ಇದನ್ನು ಸ್ವತಃ ರಜನಿ ಕೂಡಾ ಗಂಭೀರವಾಗಿ ಪರಿಶೀಲಿಸುತ್ತಿದ್ದಾರೆ. ಒಂದು ವೇಳೆ ರಜನಿ ಒಪ್ಪಿದರೆ ಯಾವುದೇ ಸಂದರ್ಭದಲ್ಲಿ ಅವರ ನೇಮಕ ಆಗಬಹುದು ಎಂಬ ಸುದ್ದಿ ಹಬ್ಬಿದೆ.

ರಜನಿ ರಾಜ್ಯಪಾಲರಾದರೆ ತೆಲಂಗಾಣ ಮತ್ತು ತಮಿಳುನಾಡು ಎರಡೂ ಕಡೆ ಬಿಜೆಪಿಗೆ ಲಾಭವಾಗಲಿದೆ ಎಂಬುದು ಪಕ್ಷದ ಉದ್ದೇಶ. ಇತ್ತೀಚೆಗಷ್ಟೇ ರಜನಿ ಅವರ ಸೋದರ ಸತ್ಯನಾರಾಯಣ ರಾವ್‌ ಅವರು ‘ರಜನೀಕಾಂತ್‌ ಅವರು ನೇರವಾಗಿ ರಾಜಕೀಯಕ್ಕೆ ಪ್ರವೇಶಿಸದೇ ಇರಬಹುದು. ಆದರೆ ಖಂಡಿತ ಅವರು ರಾಜ್ಯದ ರಾಜ್ಯಪಾಲರಾಗುತ್ತಾರೆ’ ಎಂದು ಹೇಳಿದ್ದರು. ಈ ಹೇಳಿಕೆ ಇಂಥದ್ದೊಂದು ಸಾಧ್ಯತೆಯನ್ನು ಮತ್ತಷ್ಟು ದಟ್ಟವಾಗಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ