Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

15 ರಿಂದ ಸಂಸತ್ ಮೊದಲ ಅಧಿವೇಶನ ಸಾಧ್ಯತೆ

 

ನವದೆಹಲಿ: ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ 18ನೇ
ಲೋಕಸಭೆಯ ಮೊದಲ ಅಧಿವೇಶನ ಜೂನ್ 15ಕ್ಕೆ ಆರಂಭವಾಗುವ ಸಂಭವ ಇದೆ ಎಂದು ಮೂಲಗಳು ತಿಳಿಸಿವೆ.

ಜೂನ್ ಮೂರನೇ ವಾರದಲ್ಲಿ ಸಂಸತ್ತಿನ ಮೊದಲ ಅಧಿವೇಶನ ನಡೆಯಲಿದ್ದು, ಲೋಕಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ನಂತರ ಹೊಸ ಸ್ಪೀಕರ್ ಆಯ್ಕೆ ನಡೆಯಲಿದೆ.

ರಾಷ್ಟ್ರಪತಿ ದೌಪರ್ದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆ ಮೂಲಕ ಅಧಿವೇಶನವನ್ನು ಔಪಚಾರಿಕವಾಗಿ ಉದ್ಘಾಟಿಸಲಿದ್ದಾರೆ.

ಅಧಿವೇಶನದ ದಿನಾಂಕಗಳ ಕುರಿತು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಧಿವೇಶನದ ಸಂದರ್ಭದಲ್ಲಿ ಸಚಿವ ಸಂಪುಟದ ಹೊಸ ಸದಸ್ಯರನ್ನು ಉಭಯ ಸದನಗಳಿಗೆ ಪ್ರಧಾನಿ ಪರಿಚಯಿಸಲಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಜೂನ್ 9ರಂದು (ಭಾನುವಾರ) ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ 30 ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಂಭವ ಇದೆ. ಪ್ರತಿಜ್ಞಾವಿಧಿ ಬಳಿಕ ಸಂಪುಟ ಸಭೆ ನಡೆಯಲಿದೆ.

ಸಂಸತ್ತಿನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ನಾಯಕನನ್ನಾಗಿ ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರು ಶುಕ್ರವಾರ ಅವಿರೋಧವಾಗಿ ಆಯ್ಕೆ ಮಾಡಿದ್ದರು. ಬಳಿಕ ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿಯಾಗಿ ಮೋದಿ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ ಒಕ್ಕೂಟ 293 ಸ್ಥಾನಗಳಲ್ಲಿ ಜಯಿಸಿತ್ತು. ಬಿಜೆಪಿಗೆ 240 ಸ್ಥಾನಗಳು ಲಭಿಸಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು