Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪ್ರತಿಷ್ಠಿತ ಸಂಸ್ಥೆಗೆ ವೀರರಾಣಿಯ ಹೆಸರು ?

ಬೆಳಗಾವಿ : ಕಿತ್ತೂರನ್ನು ಆಳಿದ ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಅವರ ಹೆಸರನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈಗಾಗಲೇ ಕೆಲ ಸಂಸ್ಥೆಗಳಿಗೆ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ಇದೀಗ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹೆಸರು ಕಿತ್ತೂರು ರಾಣಿ ಚನ್ನಮ್ಮ ಎಂದು ನಾಮಕರಣ ಮಾಡುವ ಸಿದ್ಧತೆ ನಡೆದಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ವಾಕರಸಾ ಸಂಸ್ಥೆ) ಹೆಸರು ಇನ್ನು ಮುಂದೆ, ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ (ಆರ್‌ಸಿಆರ್‌ಟಿಸಿ) ಎಂದು ಮರು ನಾಮಕರಣವಾಗಲಿದೆ. ಈ ಕುರಿತು ನಿಗಮದ ಅಧ್ಯಕ್ಷ, ಶಾಸಕ ರಾಜು ಕಾಗೆ ಅಧ್ಯಕ್ಷತೆಯಲ್ಲಿ ಫೆ.17ರಂದು ನಡೆದ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ಠರಾವು ಪಾಸ್‌ ಮಾಡಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಸರಕಾರ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಿದ್ದು, ಶೀಘ್ರ ಅದು ಆಗಲಿದೆ ಎಂದು ಸಂಸ್ಥೆ ಅಧ್ಯಕ್ಷ ರಾಜು ಕಾಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೆಸರು ಬದಲಿಗೆ 3 ಹೆಸರು ಆಡಳಿತ ಮಂಡಳಿ ಸಭೆಯಲ್ಲಿಪ್ರಮುಖವಾಗಿ ಚರ್ಚೆಗೆ ಬಂದಿದ್ದವು. ಕಿತ್ತೂರ ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ,ಇನ್ನೊಂದು ಕಿತ್ತೂರ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತೊಂದು ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಸರುಗಳ ಬಗ್ಗೆ ವಿಸ್ತೃತ ಚರ್ಚೆ ನಡೆದಿದೆ. ಕಿತ್ತೂರ ಕರ್ನಾಟಕ ಮತ್ತು ಕಿತ್ತೂರ ರಾಣಿ ಚನ್ನಮ್ಮ ನಾಮಕರಣ ಮಾಡಿದರೆ ಶಾರ್ಟ್‌ಕಟ್‌ ಇಂಗ್ಲಿಷ್‌ನಲ್ಲಿಕೆಕೆಆರ್‌ಟಿಸಿ ಎಂದಾಗುತ್ತದೆ.

ಈಗಾಗಲೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಶಾರ್ಟ್‌ಕಟ್‌ ಹೆಸರು ಕೆಕೆಆರ್‌ಟಿಸಿ ಎನ್ನಲಾಗುತ್ತಿದೆ. ಇದರಿಂದ ಸರಕಾರದ ಮಟ್ಟದಲ್ಲಿ ಚರ್ಚೆ ಮತ್ತು ಅನುದಾನ ಹಂಚಿಕೆ ವೇಳೆ ಗೊಂದಲ ಉಂಟಾಗುವ ಸಾಧ್ಯತೆಗಳಿವೆ. ವಿಸ್ತೃತ ಚರ್ಚಿಸಿದಾಗ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ಮಾಡುವುದರಿಂದ ಗೊಂದಲಕ್ಕೆ ಆಸ್ಪದ ಸಿಗುವುದಿಲ್ಲ. ಹಾಗಾಗಿ ಇದನ್ನು ಅಂತಿಮಗೊಳಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವರದಿಗೆ ನಿರ್ದೇಶನಪ್ರಸ್ತಾವನೆ ಸ್ವೀಕರಿಸಿರುವ ಸರಕಾರವು, ಸಮಗ್ರ ವರದಿ ನೀಡುವಂತೆ ಸಂಸ್ಥೆಗೆ ನಿರ್ದೇಶನ ನೀಡಿದೆ. ಸಂಘ ಸಂಸ್ಥೆಗಳು, ಸಾರ್ವಜನಿಕರ ಬೇಡಿಕೆಗಳ ವಿಷಯ ಒಳಗೊಂಡ ವರದಿ ನೀಡಿದ್ದೇವೆ. ವೆಚ್ಚದ ಮಾಹಿತಿಗೆ ಸಮಯ ಬೇಕಾಗುತ್ತದೆ. ಅದನ್ನೂ ಸಲ್ಲಿಸುತ್ತೇವೆ ಎಂದು ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ತಿಳಿಸಿದ್ದಾರೆ.

ಈಶಾನ್ಯ ಸಾರಿಗೆ ಈಗ ಕೆಕೆಆರ್‌ಟಿಸಿಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೆಸರನ್ನು 2021ರಲ್ಲಿಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಎಂದು ಸರಕಾರ ಬದಲಿಸಿದೆ. ಅದೇ ರೀತಿ ಮುಂಬಯಿ ಕರ್ನಾಟಕ ಪ್ರದೇಶವನ್ನು ಕಿತ್ತೂರ ಕರ್ನಾಟಕ ಎಂದು ಅಧಿಸೂಚನೆ ಹೊರಡಿಸಿದೆ. ಆದರೆ, ಸಂಸ್ಥೆ ಹೆಸರಿನಲ್ಲಿಯಾವುದೇ ಬದಲಾವಣೆಗಳಾಗಲಿಲ್ಲ. ಈ ಹಿನ್ನೆಲೆಯಲ್ಲಿಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ನಾನಾ ಸಂಘಟನೆಗಳಿಂದ ಹೆಸರು ಬದಲಾವಣೆಗೆ ಒತ್ತಡಗಳು ಕೇಳಿ ಬಂದಿದ್ದವು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ