Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ನಡೆದ ಗುಂಡಿನ ದಾಳಿಯ ಕಾರಣ ಬಹಿರಂಗ

ಬೆಳಗಾವಿ : ಬೆಳಗಾವಿಯಲ್ಲಿ ಬುಧವಾರ ನಡೆದ ಯುವಕನ ಮೇಲೆ ಗುಂಡಿನ ದಾಳಿ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಯುವಕ ಕೊನೆಗೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ನಡುವೆ ಪೊಲೀಸರು ಘಟನೆಗೆ ಕಾರಣ ಏನು ಎನ್ನುವುದನ್ನು ಪತ್ತೆ ಮಾಡಿದ್ದಾರೆ.

ಬೆಳಗಾವಿ ಆಸ್ಪತ್ರೆಯ ಬೆಡ್ ಮೇಲೆ ನರಳಾಡುತ್ತಿರುವ ಯುವಕನಿಂದ ಈಗ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮನೆಯೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಹಾಗೂ ತಂಡ ಸಮಗ್ರ ಪ್ರಕರಣದ ಮಾಹಿತಿ ಪಡೆದುಕೊಂಡಿದೆ.

ಬೆಳಗಾವಿಯ ಆಂಜನೇಯ ನಗರದಲ್ಲಿ ಬುಧವಾರ ಸಂಜೆ ಟಿಳಕವಾಡಿಯ ದ್ವಾರಕಾನಗರದ ಪ್ರಣಿತ್ ಕುಮಾರ್ (31 ವರ್ಷ) ಸ್ನೇಹಿತೆ ಸ್ಮಿತಾ ಮನೆಗೆ ಊಟಕ್ಕೆ ಹೋಗಿದ್ದ. ಊಟ ಮಾಡಬೇಕು ಅಂದುಕೊಳ್ಳುವಷ್ಟರಲ್ಲಿ ಪ್ರಣಿತ್ ಮಾಜಿ ಸ್ನೇಹಿತೆ ಸ್ಮಿತಾಳ ಮನೆಗೆ ಬಂದಿದ್ದಾಳೆ. ಗಂಡ ಸತ್ತ ಸ್ಮಿತಾ ಒಬ್ಬಳೆ ಇದ್ದು ಆಕೆಯ ಮನೆಗೆ ಪ್ರಣಿತ್ ಯಾಕೆ ಬಂದ ಎಂದು ಅನುಮಾನಗೊಂಡು ಪ್ರಣಿತ್ ಜೊತೆಗೆ ಜಗಳಕ್ಕಿಳಿದಿದ್ದಾಳೆ. ಈ ವೇಳೆ ಸ್ಮಿತಾ ಎಂಟ್ರಿಯಾಗಿ ಇಬ್ಬರ ನಡುವಿನ ಜಗಳ ಬಗೆ ಹರಿಸುವ ಕೆಲಸ ಮಾಡಿದ್ದಾಳೆ. ಆದರೆ ಇದು ಇಷ್ಟಕ್ಕೆ ಮುಗಿದಿಲ್ಲ. ಮಾಜಿ ಪ್ರೇಯಸಿ ಹಿಂದೆ ಹಿಂದೆ ಮತ್ತೆ ಮೂರು ಜನ ಬಂದಿದ್ದಾರೆ. ಪ್ರಣಿತ್ ಮೇಲೆ ಹಲ್ಲೆ ಮಾಡಿ ಜೊತೆಗೆ ತಂದಿದ್ದ ಗನ್ ತೆಗೆದು ಶೂಟ್ ಮಾಡಿದ್ದಾರೆ. ಗುಂಡಿನ ದಾಳಿಯಿಂದ ಪ್ರಣಿತ್ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾನೆ. ಗುಂಡು ಹಣೆ ಭಾಗದಿಂದ ಕಿವಿ ಪಕ್ಕ ಹಾದುಗೋಗಿದೆ. ಇತ್ತ ಆರೋಪಿಗಳು ಮತ್ತೊಂದು ಬಾರಿ ಗುಂಡಿನ ದಾಳಿ ಮಾಡಿದ್ದು ಅದು ತೊಡೆಯ ಭಾಗಕ್ಕೂ ತಗುಲಿದೆ. ತಕ್ಷಣ ಕುಸಿದು ಪ್ರಣಿತ್ ಕೆಳಗೆ ಬೀಳುತ್ತಿದ್ದಂತೆಯೇ ಮತ್ತೆ ಗುಂಡು ಹಾರಿಸಲು ನೋಡಿದ್ದಾರೆ. ಅಗ ಫೈರ್ ಆಗಿಲ್ಲ. ತಕ್ಷಣ ನಾಲ್ಕು ಆರೋಪಿಗಳು ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದ ಪ್ರಣಿತ್​​ನನ್ನು ಸ್ಮಿತಾ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಳಮಾರುತಿ ಠಾಣೆ ಪೊಲೀಸರಿಗೆ ವಿಷಯ ಗೊತ್ತಾಗಿದೆ. ಪೊಲೀಸರು ಆಸ್ಪತ್ರೆಗೆ ಬಂದು ಹಲ್ಲೆಗೊಳಗಾದ ಪ್ರಣಿತ್​ರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಆಸ್ಪತ್ರೆಗೆ ಭೇಟಿ ನೀಡಿ ಪ್ರಣಿತ್ ಆರೋಗ್ಯ ವಿಚಾರಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.‌ ಬಳಿಕ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದರು. ಡಿಸಿಪಿ ರೋಹನ್ ಜಗದೀಶ್ ಸಾಥ್ ನೀಡಿದ್ದರು.
ಎಸಿಪಿ ನೇತೃತ್ವದ ಎರಡು ತಂಡ ರಚನೆ ಮಾಡಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಬಳಕೆಯಾದ ಗನ್ ಯಾವುದು ಎಂಬುದರ ಕುರಿತ ತನಿಖೆ ಮಾಡುತ್ತೇವೆ. ಪ್ರೀತಿ ವಿಚಾರಕ್ಕೆ ಗಲಾಟೆಯಾಗಿದ್ದು ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ‌‌. ಐಸಿಯುವಿನಲ್ಲಿ ಪ್ರಣಿತ್​ಗೆ ಚಿಕಿತ್ಸೆ ಮುಂದುವರಿದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ