Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಕ್ಫ್ : ಕಡತವೇ ನಾಪತ್ತೆ

ಸುವರ್ಣ ವಿಧಾನಸಭೆ: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ವಕ್ಸ್ ಆಸ್ತಿಗಳ ದುರ್ಬಳಕೆ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಉಪಲೋಕಾಯುಕ್ತರು ನಡೆಸಿದ್ದ ತನಿಖಾ ವರದಿ ಸೇರಿ ಇತರೆ ಮಾಹಿತಿಗಳ ಮುಖ್ಯ ಕಡತವೇ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ವಕ್ಫ್‌ ಆಸ್ತಿಗಳ ದುರುಪಯೋಗಕ್ಕೆ ಸಂಬಂಧಿಸಿ ಅನ್ವರ್‌ ಮಾಣಿಪ್ಪಾಡಿ ವರದಿ ಅನ್ವಯ ಮಾಜಿ ಉಪಲೋಕಾಯುಕ್ತ ಎನ್.ಆನಂದ್ ತನಿಖಾ ವರದಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ 150 ಕೋಟಿ ರು. ಆಮಿಷ ಪ್ರಕರಣ ಕುರಿತು ಇಲಾಖೆಯಲ್ಲಿ ಕಡತ ತೆರೆಯಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಆಡಳಿತ ನಡೆಸಿದ ಅವಧಿಯಲ್ಲಿ ಕಡತಗಳನ್ನು ಆರಂಭಿಸಲಾಗಿತ್ತು. ಆದರೆ, ಈಗ ಆ ಕಡತವೇ ಕಾಣೆಯಾಗಿದೆ ಎಂದು ಮೂಲಗಳು ತಿಳಿಸಿವೆ.

2014 ಏ.28ರಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಡತಗಳನ್ನು ಸಚಿವರ ಅವಗಾಹನೆಗೆ ಮತ್ತು ಆದೇಶಕ್ಕೆ ಕಳುಹಿಸಿತ್ತು.ರಾಜ್ಯ ಅಲ್ಪಸಂಖ್ಯಾತರ ಆಯೋಗದ ವರದಿ ಮೇಲೆ ಸಚಿವ ಸಂಪುಟ ಸಭೆ ಕೆಲ ಸಲಹೆಗಳನ್ನು ಅನುಮೋದಿಸಿ ಅಡ್ವಕೆಟ್ ಜನರಲ್ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಮಾಹಿತಿ ಕಡತದಲ್ಲಿ ಅಡಕವಾಗಿತ್ತು ಎನ್ನಲಾಗಿದೆ.

ಸಚಿವರ ಕಚೇರಿಗೆ ಹೋಗಿತ್ತು:

ಕಡತವನ್ನು ಹಿಂತಿರುಗಿಸುವಂತೆ ಇಲಾಖೆಯಿಂದ ಸಚಿವರ ಕಚೇರಿಗೆ ಹಲವು ಬಾರಿ ಮನವಿ ಮಾಡಲಾಗಿತ್ತು. ಆದರೆ ಇಲಾಖೆಗೆ ಕಡತ ಹಿಂತಿರುಗಿಸಿಲ್ಲ. ಇಲಾಖೆಯ ಹಿರಿಯ ಅಧಿಕಾರಿಗಳು ಖುದ್ದಾಗಿ ಸಚಿವರ ಕಚೇರಿಗೆ ತೆರಳಿ ಕಡತ ಹುಡುಕಿದಾಗ ಪತ್ತೆಯಾಗಿರಲಿಲ್ಲ. ಸಚಿವರ ಕಚೇರಿಗೆ ಕಡತ ಕಳುಹಿಸಿರುವುದಕ್ಕೆ ದಾಖಲೆ ಇದೆ. ಆದರೆ, ಇಲಾಖೆಗೆ ಹಿಂತಿರುಗಿಸಿರುವುದಕ್ಕೆ ಯಾವುದೇ ದಾಖಲೆ ಇಲ್ಲ ಎಂದು ಹೇಳಲಾಗಿದೆ.

ಕಡತ ಈಗಲೂ ಹುಡುಕುತ್ತಿದ್ದು, ಲಭ್ಯವಾಗಿಲ್ಲ. ಕಡತ ನಾಪತ್ತೆಯಾಗಿದೆಯೋ? ಇಲ್ಲವೋ? ಎಂಬ ಮಾಹಿತಿ ಇಲ್ಲ ಎಂಬುದಾಗಿ ಇಲಾಖೆ ಮೂಲಗಳು ಹೇಳುತ್ತಿವೆ. ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಕಾರಣ ಕಡತದ ಅಗತ್ಯತೆ ಇದೆ. ಆದರೆ, ಇದೀಗ ಕಡತ ಇಲ್ಲದಿರುವುದು ಹಲವು ಅನುಮಾಗಳಿಗೆ ಎಡೆಮಾಡಿಕೊಟ್ಟಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ