Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಇದೆ ಉದ್ಯೋಗಾವಕಾಶ

ಬೆಂಗಳೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್-ಎ ದರ್ಜೆಯ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 12ರಿಂದ ಅನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿಗೆ ಬೇಕಾದ ಅರ್ಹತೆಗಳು, ಶುಲ್ಕ ಸೇರಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

ಹುದ್ದೆಯ ಹೆಸರು: ಪಶು ವೈದ್ಯಾಧಿಕಾರಿ
ಹುದ್ದೆಗಳ ಸಂಖ್ಯೆ: 342 (ಉಳಿಕೆ ಮೂಲ ವೃಂದ) + 58 (ಬ್ಯಾಕ್‌ಲಾಗ್‌)
ಅರ್ಜಿ ಸಲ್ಲಿಕೆ ಆರಂಭ: ಆಗಸ್ಟ್‌ 12
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆ.12

ವಿದ್ಯಾರ್ಹತೆ
ಪಶು ವೈದ್ಯಕೀಯ ವಿಜ್ಞಾನ (BVSc), ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ (B.V.Sc. & AH) ಪದವೀಧರರು ಅರ್ಜಿ ಸಲ್ಲಿಸಬಹುದು. (ಕೆವಿಸಿ/ಐವಿಸಿಯಲ್ಲಿ ನೋಂದಣಿಯಾಗಿರಬೇಕು)

ವಯೋಮಿತಿ
ಅರ್ಜಿ ಸಲ್ಲಿ..ಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ – 18 ವರ್ಷಗಳ ವಯೋಮಾನದವರಾಗಿರಬೇಕು ಹಾಗೂ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಸಾಮಾನ್ಯ ಅರ್ಹತೆ: 35 ವರ್ಷ
ಒಬಿಸಿ (2ಎ, 2ಬಿ, 3ಎ, 3ಬಿ): 38 ವರ್ಷ
ಎಸ್‌ಸಿ, ಎಸ್‌ಟಿ, ಪ್ರವರ್ಗ-1: 40 ವರ್ಷ

ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ: 600 ರೂ.
ಒಬಿಸಿ (2ಎ, 2ಬಿ, 3ಎ, 3ಬಿ): 300 ರೂ.
ಮಾಜಿ ಸೈನಿಕರಿಗೆ : 50 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನರು: ಶುಲ್ಕ ಪಾವತಿಯಿಂದ ವಿನಾಯಿತಿ

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

Veterinary-officersDownload
ಆಯ್ಕೆ ವಿಧಾನ
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:
ಈ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮ ಉಪ ನಿಯಮ-7 ರಲ್ಲಿ ನಿರ್ದಿಷ್ಟ ಪಡಿಸಲಾದಂತೆ, ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ.. ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು ಎಸ್.ಎಸ್.ಎಲ್.ಸಿ. ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು.

ವಿಶೇಷ ಸೂಚನೆ: ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರನ್ವಯ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 29-11-2022ರಂದು ಮತ್ತು ಆ ನಂತರದಲ್ಲಿ ನಡೆಸಿರುವ ಕನ್ನಡ ಭಾಷಾ ಪರೀಕ್ಷೆಗಳಿಗೆ ಹಾಜರಾಗಿ ಉರ್ತೀರ್ಣರಾಗಿದ್ದಲ್ಲಿ ಅದರ ಫಲಿತಾಂಶವನ್ನು ಈ ಅಧಿಸೂಚನೆಯಲ್ಲಿನ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೂ ಪರಿಗಣಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ ಲೈನ್ ಅರ್ಜಿಯಲ್ಲಿನ ನಿಗದಿತ ಅಂಕಣದಲ್ಲಿ ಕನ್ನಡ ಭಾಷಾ ಪರೀಕ್ಷೆ ಕುರಿತಂತೆ ಕೇಳಿರುವ ಮಾಹಿತಿಯನ್ನು ತಪ್ಪದೇ ನಮೂದಿಸಬೇಕು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ