Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ, ಶಿವಮೊಗ್ಗ, ಬಳ್ಳಾರಿಗೆ ಮುಂದಿನ 3 ಗಂಟೆಯಲ್ಲಿ ಅಪ್ಪಳಿಸಲಿದೆ ಗುಡುಗು-ಮಳೆ

ಬೆಂಗಳೂರು: ಕರ್ನಾಟಕದ ಮೂರು ಜಿಲ್ಲೆಗಳಿಗೆ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಶಿವಮೊಗ್ಗ, ಬಳ್ಳಾರಿಗೆ ಭಾರೀ ಮಳೆ ಗುಡುಗು ಆಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ ಮೂರು ಗಂಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನೌಕಾಸ್ಟ್ ವರದಿ ನೀಡಿದೆ. ಹವಾಮಾನ ಸ್ಥಿತಿದಕ್ಷಿಣ ತಮಿಳುನಾಡು ಮತ್ತು ನೆರೆಹೊರೆಯಲ್ಲಿ ಚಂಡಮಾರುತ ಇದೆ.

ಇದು ಶ್ರೀಲಂಕಾ ದಕ್ಷಿಣ ಭಾಗದತ್ತ ಚಲಿಸುತ್ತಿದೆ. ಈ ಕಾರಣದಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳು ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಭಾನುವಾರದಂದು ಮಳೆಯ ಪ್ರಮಾಣ ಇಳಿಕೆ ಆಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರಿನ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಮುಂದಿನ ವಾರದ ಆರಂಭದಲ್ಲಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರಾದ ಮಳೆಯಾಗುವ ಸಾಧ್ಯತೆ ಇದೆ.ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದಲ್ಲಿ ಒಣ ಹವಾಮಾನ ಮುಂದುವರಿಯಲಿದೆ.

ಜೊತೆಗೆ ಮುಂದಿನ ವಾರ ಪೂರ್ತಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದೆ. ಅಲ್ಲದೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಫಿಟ್ಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?