Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದು (ಮೇ 29) ಕರ್ನಾಟಕದ 6 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಗುರುವಾರ (ಮೇ 29) ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮೈಸೂರು, ಉಡುಪಿ, ದಾವಣಗೆರೆ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರ ಮಳೆಯೊಂದಿಗೆ ನಿರಂತರ ಗಾಳಿ (ಗಾಳಿಯ ವೇಗ ಗಂಟೆಗೆ 40-50 ಕಿ.ಮೀ.) ಇರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಮೇ 30 ರಂದು 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌
ಇನ್ನು ಮೇ 30ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಮೇ 31ರಂದು ರಾಜ್ಯ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಜೂನ್‌ 1ರಂದು ಕರಾವಳಿ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಮೀನುಗಾರರಿಗೆ ಸೂಚನೆ…
ರಾಜ್ಯದ ಕರಾವಳಿ ತೀರದಲ್ಲಿ ಮೇ 31 ರವರೆಗೆ ಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಅದು ಪ್ರತಿ ಗಂಟೆಗೆ 60 ಕಿ.ಮೀ ವರೆಗೂ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಮುದ್ರದ ಅಲೆಗಳು ಒರಟಾಗಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು