Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಹೋದರರಿಬ್ಬರ ದುರಂತ ಸಾವು

ಬೆಳಗಾವಿ: ದಿನಗಳಲ್ಲಿ ಹೃದಯಘಾತ ಸರ್ವೇಸಾಮಾನ್ಯವಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ಸಹೋದರರಿಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರದಂದು ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.

ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ ನಸುಕಿನ 4ಕ್ಕೆ ಹೃದಯಾಘಾತವಾಗಿದೆ. ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (24) ಕುಸಿದು ಬಿದ್ದರು. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣ ಬಸವರಾಜ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ
ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.

ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ