Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚೋರ್ಲಾಘಾಟ್ ನಲ್ಲಿ ಚಲಾವಣೆ ಇಲ್ಲದ ರೂ.400 ಕೋಟಿ ದರೋಡೆ


  • ಬೆಳಗಾವಿ:

  • ಕೇಂದ್ರದ ನರೇಂದ್ರ ಮೋದಿ ಸರಕಾರ ಹಲವು ವರ್ಷಗಳ ಹಿಂದೆ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ್ದು ಹಳೆಯ ಕಥೆ. ಆದರೂ ಆ 2000 ರೂ. ಮುಖಬೆಲೆಯ ನೋಟುಗಳು ಎಲ್ಲಿಗೆ ಹೋಗಿವೆ ಎತ್ತ ಹೋಗಿವೆ ಎಂಬ ಕುತೂಹಲ ಜನರಲ್ಲಿ ಇದೆ.


  • ಈ ನಡುವೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ಚೋರ್ಲಾಘಾಟ್ ನಲ್ಲಿ ನಡೆದಿರುವ ರೂ.400 ಕೋಟಿ ದರೋಡೆ ಪ್ರಕರಣ ಇದೀಗ ಮುನ್ನಲೆಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಸಹಕಾರ ಕೋರಿ ಮಹಾರಾಷ್ಟ್ರದ ನಾಸಿಕ್ ಪೊಲೀಸರು ಈಗ ಬೆಳಗಾವಿ ಎಸ್ ಪಿ ಕೆ.ರಾಮರಾಜನ್ ಅವರಿಗೆ ಪತ್ರ ಬರೆದಿದ್ದಾರೆ.

  • ಈ ಬಗ್ಗೆ ಜನವರಿ ಒಂದರಂದು ನಾಸಿಕ್ ಪೊಲೀಸರಿಗೆ ಸಂದೀಪ ಪಾಟೀಲ ಎಂಬ ವ್ಯಕ್ತಿ ದೂರು ನೀಡಿದ್ದಾರೆ. ಘಟನೆ 2025ರ ಅಕ್ಟೋಬರ್ 22ರಂದು ನಡೆದಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ರೂ.2000 ಮುಖಬೆಲೆಯ ಸುಮಾರು 400 ಕೋಟಿ ರೂಪಾಯಿ ಹಣವನ್ನು ಗೋವಾಕ್ಕೆ ಒಯ್ಯಲಾಗುತ್ತಿತ್ತು. ಅದನ್ನು ಚೋರ್ಲಾಘಾಟ್ ಬಳಿ ದರೋಡೆ ಮಾಡಲಾಗಿದೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ ಪಿ ಕೆ. ರಾಮರಾಜನ್ ಚಲಾವಣೆಯಲ್ಲಿಲ್ಲದ ನೋಟುಗಳ ದರೋಡೆ ಆಗಿರುವ ಕುರಿತು ನಾಸಿಕ್ ಪೊಲೀಸರು ಪತ್ರ ಬರೆದಿದ್ದು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.

  • ಈ ದೆಸೆಯಲ್ಲಿ ಕರ್ನಾಟಕ ಪೊಲೀಸರು  ಮಹಾರಾಷ್ಟ್ರ ಪೊಲೀಸರಿಗೆ ಸರ್ವ ಸಹಕಾರ ನೀಡಿದ್ದು ದರೋಡೆ ಪ್ರಕರಣ ಇಷ್ಟರಲ್ಲೇ ಬೆಳಕಿಗೆ ಬರುವ ಸಾಧ್ಯತೆ ಇದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ