Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಮೃತ್ ಯೋಜನೆಯಡಿ ಅನುದಾನ ಮಂಜೂರು : ಈರಣ್ಣ ಕಡಾಡಿ

 

ಮೂಡಲಗಿ: ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಿಂದ ಅಮೃತ್ 2.0 ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಬೆಳಗಾವಿ ವಿಭಾಗದ ಜಿಲ್ಲೆಯ 32 ನಗರ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಶೇ 50%, ರಾಜ್ಯ ಸರ್ಕಾರದ ಶೇ 40% ಹಾಗೂ ಸಾರ್ವಜನಿಕರ ವಂತಿಕೆ ಶೇ 10% ಈ ಅನುಪಾತದಲ್ಲಿ ಒಟ್ಟು 836.45 ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ರವಿವಾರ ಫೆ- 16ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅದರಲ್ಲೂ ವಿಶೇಷವಾಗಿ ಮೂಡಲಗಿ, ನಾಗನೂರು, ಕಲ್ಲೋಳಿ, ಅರಭಾವಿ, ಘಟಪ್ರಭಾ ಈ ಐದು ಅವಳಿ ನಗರಗಳಿಗೆ ನಿರಂತರ ನೀರು ಪೂರೈಸುವ ಉದ್ದೇಶದಿಂದ 165 ಕೋಟಿ ರೂಪಾಯಿಗಳ ಅನುದಾನ ಮಂಜೂರಾಗಿದೆ. ಈಗಾಗಲೇ ಜಿಲ್ಲೆಯ ಹಲವು ಕಡೆ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದ್ದು, ಅತಿ ಶೀಘ್ರದಲ್ಲಿ ಉಳಿದೆಲ್ಲ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಸದರಿ ಕಾಮಗಾರಿಗಳಿಗೆ ಅನುದಾನ ಮಂಜೂರಿ ಮಾಡಿದ ನೀಡಿದ ಕೇಂದ್ರ ನಗರ ವ್ಯವಹಾರಗಳ ಸಚಿವರಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಹಾಗೂ ಕರ್ನಾಟಕ ರಾಜ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು.

ಜಿಲ್ಲೆಗೆ ಮಂಜೂರಾದ ಕಾಮಗಾರಿಗಳ ವಿವರಗಳು
ಅ.ನಂ ಕಾಮಗಾರಿಗಳ ವಿವರ ಒಟ್ಟು ಮಂಜೂರಾದ ಅನುದಾನ
1 ಹಾರುಗೇರಿ ಮತ್ತು ಮುಗಳಖೋಡ 51.94
2 ಚನ್ನಮ್ಮ ಕಿತ್ತೂರ 25.21
3 ಎಂ.ಕೆ.ಹುಬ್ಬಳ್ಳಿ 18.09
4 ಹುಕ್ಕೇರಿ 9.63
5 ಚಿಂಚಲಿ 23.90
6 ರಾಯಬಾಗ 22.83
7 ಖಾನಾಪೂರ 20.52
8 ಐನಾಪುರ 14.13
9 ಯಕ್ಸಂಬಾ 16.36
10 ಅಥಣಿ 47.67
11 ಕಂಕಣವಾಡಿ 14.83
12 ಕುಡಚಿ 18.62
13 ಸಂಕೇಶ್ವರ 11.74
14 ಮುನವಳ್ಳಿ 39.11
15 ಅಂಕಲಗಿ-ಅಕ್ಕತಂಗೇರಹಾಳ 42.26
16 ಬೊರಗಾಂವ 19.98
17 ಘಟಪ್ರಭಾ, ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ 165.44
18 ಕಾಗವಾಡ, ಶೇಡಬಾಳ, ಉಗಾರ ಖುರ್ದ 66.74
19 ಕಬ್ಬೂರ 22.25
20 ರಾಮದುರ್ಗ 19.56
21 ಯರಗಟ್ಟಿ 29.14
22 ಕೊಣ್ಣುರ 19.67
23 ನಿಪ್ಪಾಣಿ 32.83
24 ಮಚ್ಛೆ ಮತ್ತು ಪೀರನವಾಡಿ 85.00
ಒಟ್ಟು 836.45
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?