Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಸಂತ ಪಂಚಮಿ : ಕುಂಭಮೇಳಕ್ಜೆ ಮತ್ತೆ ಜನಸಾಗರ ನಿರೀಕ್ಷೆ

 

ಮಹಾಕುಂಭ ನಗರ: ತ್ರಿವೇಣಿ ಸಂಗಮದಲ್ಲಿ ವಸಂತ
ಪಂಚಮಿ ದಿನವಾದ ಸೋಮವಾರ ಮೂರು ಕೋಟಿಗೂ ಹೆಚ್ಚಿನ ಸಂಖ್ಯೆಯ ಭಕ್ತರು ಪವಿತ್ರ ಸ್ನಾನ ಮಾಡಲಿದ್ದು, ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಮೌನಿ ಅಮಾವಾಸ್ಯೆಯ ಪವಿತ್ರ ಸ್ನಾನದ ಸಂದರ್ಭಸಂಭವಿಸಿದ ಕಾಲ್ತುಳಿತ ದುರಂತದ ನಂತರ ಉತ್ತರ ಪ್ರದೇಶ ಸರ್ಕಾರ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಕುಂಭಮೇಳದ ಮೂರನೇ ಪವಿತ್ರ ಸ್ನಾನದ ದಿನವಾದ ವಸಂತ ಪಂಚಮಿಯಂದು ಪವಿತ್ರ ಸ್ನಾನ ಮಾಡಲು ಅಸಂಖ್ಯಾತ ಭಕ್ತರು ಮಹಾಕುಂಭ ನಗರದಲ್ಲಿ ಭಾನುವಾರವೇ ಜಮಾಯಿಸಿದ್ದರು.

ಬೃಹತ್ ಧಾರ್ಮಿಕ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು 2019ರ ಅರ್ಧ ಕುಂಭಮೇಳವನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಅಧಿಕಾರಿಗಳ ತಂಡದ ಭಾಗವಾಗಿದ್ದ ಇಬ್ಬರು ಹಿರಿಯ ಐಎಎಸ್‌ ಅಧಿಕಾರಿಗಳಾದ ಆಶಿಶ್ ಗೋಯಲ್ ಮತ್ತು ಭಾನುಚಂದ್ರ ಗೋಸ್ವಾಮಿ ಅವರನ್ನು ನಿಯೋಜಿಸಲಾಗಿದೆ.

ಮಹಾಕುಂಭ ನಗರಕ್ಕೆ ಭಾನುವಾರ ಭೇಟಿ ನೀಡಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾನು ಭಾಸ್ಕ‌ರ್ ಅವರು ಜನದಟ್ಟಣೆ ನಿಯಂತ್ರಣದ ಕ್ರಮಗಳ ಮೇಲ್ವಿಚಾರಣೆ ನಡೆಸಿದರು. ಜನದಟ್ಟಣೆ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪೊಲೀಸರಿಗೆ ಆದೇಶಿಸಿದರು.

ಸಂಗಮದಲ್ಲಿ 28 ಆಯಕಟ್ಟಿನ ಸ್ಥಳಗಳನ್ನು ಗುರುತಿಸಲಾಗಿದ್ದು, ಕ್ಷಿಪ್ರ ಕಾರ್ಯಪಡೆ ಹಾಗೂ ಅರೆಸೇನಾ ಪಡೆಯ ಯೋಧರನ್ನು ನಿಯೋಜಿಸಲಾಗಿದೆ. ವಿವಿಐಪಿ ಪಾಸ್‌ಗಳನ್ನು ರದ್ದುಗೊಳಿಸಲಾಗಿದ್ದು, ವಾಹನ ರಹಿತ ವಲಯವನ್ನಾಗಿ ಘೋಷಿಸಲಾಗಿದೆ.

ಮೌನಿ ಅಮಾವಾಸ್ಯೆಯ ಕಾಲ್ತುಳಿತ ದುರಂತದ ನಂತರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಮಹಾಕುಂಭ ನಗರಕ್ಕೆ ಭೇಟಿ ನೀಡಿ ಸಂತರು ಹಾಗೂ ಅಧಿಕಾರಿಗಳ ಸಭೆ ನಡೆಸಿದ್ದರು. ಭಕ್ತರ ಪವಿತ್ರ ಸ್ನಾನ ಸುಗಮವಾಗಿ ನಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಭಾನುವಾರ ಮಧ್ಯಾಹ್ನ 12 ಗಂಟೆ ವೇಳೆಗೆ 90 ಲಕ್ಷ ಭಕ್ತರು ಗಂಗಾ ಮತ್ತು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಜ. 13ರಿಂದ ಇದುವರೆಗೂ 33.61 ಕೋಟಿ ಭಕ್ತರು ಮಿಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಗ್‌ರಾಜ್‌ನ ಫಫಾಮುವಿನಿಂದ ಅರೈಲ್‌ವರೆಗೆ ಎಲ್ಲಿ ಬೇಕಾದರೂ ಭಕ್ತರು ಪವಿತ್ರ ಸ್ನಾನ ಮಾಡಬಹುದು ಎಂದು ಅಖಿಲ ಭಾರತ ಅಖಾಡ ಪರಿಷತ್‌ನ ಅಧ್ಯಕ್ಷ ಮಹಂತ ರವೀಂದ್ರ ಪುರಿ ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ