Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ

ಬೆಳಗಾವಿ: ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚಿಕ್ಕೋಡಿ, ಬೆಳಗಾವಿ ಲೋಕಸಭಾ ಮತ ಕ್ಷೇತ್ರಗಳ ಚುನಾವಣೆ ಮೇ.07 ರಂದು ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನದ ಸಮಯ ನಿಗದಿ ಪಡಿಸಲಾಗಿದೆ. ಎಲ್ಲ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು ಮತದಾರರಿಗೆ ಮತ್ತುಷ್ಟು ಮಾಹಿತಿ ನೀಡಲು ಸ್ವೀಪ್ ಕಾರ್ಯಕ್ರಮದಡಿ ಹಾಟ್ ಏರ್ ಬಲೂನ್ ಹಾರಾಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯಾರು ಮತದಾನದಿಂದ ಹೊರಗುಳಿಯಬಾರದೆಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರಗಳಲ್ಲಿ ಮತದಾರರ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಾಲಯದಲ್ಲಿರುವ ಶೌರ್ಯ (ಹುಲಿ) ಜಿಲ್ಲೆಯ ಮತದಾನ ಜಾಗೃತಿ ಮಾಸ್ಕಾಟಾಗಿ ಮಾಡಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ಶಿಂಧೆ ತಿಳಿಸಿದರು

ಉಪ-ಪೊಲೀಸ್ ಆಯುಕ್ತ ರೋಹನ್ ಜಗದೀಶ್, ಜಿಪಂ ಯೋಜನಾ ನಿರ್ದೇಶಕ ಎಂ.ಕೃಷ್ಣರಾಜು, ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಡಿ, ಜಿಪಂ. ಲೆಕ್ಕಾಧಿಕಾರಿ ಗಂಗಾ ಹಿರೇಮಠ್ ಮಹಾನಗರ ಪಾಲಿಕೆ ಆಯುಕ್ತ ಲೋಕೇಶ ಎನ್ ಮೊದಲಾದವರು ಇತರೆ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ