Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಕ್ಕೇರಿದ ಘಟಪ್ರಭೆ : ಮಠ, ದೇವಸ್ಥಾನದಲ್ಲಿ ಈಗ ನೀರೇ ನೀರು !

ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಮಳೆ ಇದುವರೆಗೆ ಬಿಡುವು ಪಡೆದಿಲ್ಲ. ಬೆಳಗಾವಿಯಲ್ಲಿ ಶುಕ್ರವಾರ ಮಧ್ಯಾಹ್ನದವರೆಗೆ ಮಳೆ ತುಸು ವಿರಾಮ ಪಡೆದುಕೊಂಡಿತ್ತು. ಆದರೆ, ಮಧ್ಯಾಹ್ನ ಧಾರಾಕಾರವಾಗಿ ಮಳೆ ಸುರಿದಿದೆ. ವ್ಯಾಪಕ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದ ಆಸ್ತಿಪಾಸ್ತಿಗೆ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.

ಜಿಲ್ಲೆಯಲ್ಲಿ ಹರಿಯುತ್ತಿರುವ ನದಿ-ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ಘಟಪ್ರಭೆ ತುಂಬಿ ಹರಿಯುತ್ತಿದ್ದು ಈಗ ಮೈತುಂಬಿಕೊಂಡಿದೆ. ಸುಣಧೋಳಿ ಮಠ ಸಂಪೂರ್ಣ ಜಲಾವೃತಗೊಂಡಿದೆ. ಮಟದ ಸ್ವಾಮೀಜಿಗಳು ಎತ್ತರದ ಸ್ಥಳದಲ್ಲಿರುವ ಕೋಣೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಮೂಡಲಗಿ ತಾಲೂಕು ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀ ದೇವಾಲಯ ಶುಕ್ರವಾರ ಸಂಪೂರ್ಣ ನೀರು ತುಂಬಿಕೊಂಡ ದೃಶ್ಯ ಕಂಡು ಬಂತು. ಶುಕ್ರವಾರ ದೇವಿಗೆ ವಿಶೇಷ ಪೂಜಾ ದಿನವಾಗಿದ್ದರಿಂದ ಭಕ್ತರು ತುಸು ದೂರದಲ್ಲೇ ನಿಂತು ಪ್ರಾರ್ಥಿಸಿಕೊಳ್ಳುತ್ತಿರುವ ದೃಶ್ಯ ಕಂಡು ಬಂತು. ನೆರೆಯ ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಮಹಾಬಲೇಶ್ವರದಲ್ಲಿ 26.7 ಸೆಂಟಿಮೀಟರ್, ನವಜಾದಲ್ಲಿ 17.2 ಸೆಂಟಿ ಮೀ., ರಾಧಾನಗರಿಯಲ್ಲಿ 23.4 ಸೆಂಟಿಮೀಟರ್, ಸಾಂಗ್ಲಿಯಲ್ಲಿ 2.6 ಸೆಂಟಿಮೀಟರ್, ಕೊಲ್ಲಾಪುರದಲ್ಲಿ 10.4 ಸೆಂಟಿಮೀಟರ್ ಮಳೆಯಾಗಿದೆ. 105. 25 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಕೊಯ್ನಾ ಜಲಾಶಯದಲ್ಲಿ ಶುಕ್ರವಾರ 81.20 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಆರು ಗೇಟ್ ಗಳ ಮೂಲಕ ನೀರು ಹರಿ ಬಿಡಲಾಗುತ್ತಿದೆ. ರಾಧಾ ನಗರಿ ಜಲಾಶಯದಿಂದ 10,000 ಕ್ಯುಸೆಕ್, ವಾರಣಾ ಜಲಾಶಯದಿಂದ 16,000 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ.

ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದ ಹೆಚ್ಚಿನ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಸೇರಿದಂತೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ