Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿವಾದಕ್ಕೆ ಕಾರಣವಾಯ್ತು ಈ ಮಾತು : ಭಾರತೀಯರ ಕುರಿತ ಸ್ಯಾಮ್ ಪಿತ್ರೋಡಾ ಹೇಳಿಕೆ

ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ನೀಡಿರುವ ಜನಾಂಗೀಯ ಹೇಳಿಕೆಗೆ ಸಂಬಂಧಿಸಿ ಅಂತರ ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ.

ಭಾರತದ ವೈವಿಧ್ಯತೆಯನ್ನು ವಿವರಿಸುವ ಸಂದರ್ಭದಲ್ಲಿ ಸ್ಯಾಮ್ ಪಿತ್ರೋಡಾ ಅವರು ಜನಾಂಗೀಯ ಹೇಳಿಕೆಗಳನ್ನು ನೀಡಿರುವುದು ಅತ್ಯಂತ ದುರದೃಷ್ಟಕರ ಮತ್ತು ಸ್ವೀಕಾರಾರ್ಹವಲ್ಲ. ಅವರ (ಪಿತ್ರೋಡಾ) ಹೇಳಿಕೆಯಿಂದ ಕಾಂಗ್ರೆಸ್‌ ಸಂಪೂರ್ಣವಾಗಿ ದೂರವಿರುತ್ತದೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಿತ್ರೋಡಾ ಹೇಳಿದ್ದಾದರೂ ಏನು ?
ಭಾರತದ ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಂತೆ ಕಾಣಿಸುತ್ತಾರೆ. ಉತ್ತರ ಭಾರತದ ಜನರು ಬಹುಶಃ ಬಿಳಿಯರಂತೆ ಕಂಡರೆ, ದಕ್ಷಿಣ ಭಾರತದ ಜನ ಆಫ್ರಿಕನ್ನರಂತೆ ಕಾಣಿಸುತ್ತಾರೆ. ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಮಾತ್ರ ಎಲ್ಲರನ್ನೂ ಒಟ್ಟಿಗೆ ನೋಡಲು ಸಾಧ್ಯ. ನಾವೆಲ್ಲರೂ ಸೋದರ-ಸೋದರಿಯರಂತೆ ಜೀವಿಸುತ್ತಿದ್ದೇವೆ' ಎಂದು ಸಂದರ್ಶನವೊಂದರಲ್ಲಿ ಪಿತ್ರೋಡಾ ಹೇಳಿದ್ದರು.

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಇಡೀ ಜಗತ್ತಿಗೆ ಅದ್ಭುತ ಉದಾಹರಣೆಯಾಗಿದೆ. ದೇಶದ ಜನರು ವಿವಿಧ ಭಾಷೆ, ಆಹಾರ ಪದ್ಧತಿಯನ್ನು ಗೌರವಿಸುತ್ತಾರೆ. ಇದು ನಾನು ನಂಬುವ ಭಾರತವಾಗಿದೆ. ಇಲ್ಲಿ ಪ್ರತಿಯೊಬ್ಬರೂ ಸ್ವಲ್ಪಮಟ್ಟಿಗೆ ರಾಜಿ ಮಾಡಿಕೊಳ್ಳುತ್ತಾರೆ ಎಂದು ಪಿತ್ರೋಡಾ ತಿಳಿಸಿದ್ದಾರೆ.

ಭಾರತದ ಕಲ್ಪನೆಯು ಪ್ರಜಾಪ್ರಭುತ್ವ, ಭ್ರಾತೃತ್ವ ಮತ್ತು ಸ್ವಾತಂತ್ರ್ಯದಲ್ಲಿ ಬೇರೂರಿತ್ತು. ಆದರೆ, ಈಗ 'ರಾಮ ನವಮಿ', 'ರಾಮ ಮಂದಿರ'ದಿಂದ ಸವಾಲನ್ನು ಎದುರಿಸುತ್ತಿದೆ. ಸದಾಕಾಲ ದೇವಸ್ಥಾನಗಳಿಗೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಭಾರತೀಯ ನಾಯಕನಂತೆ ಮಾತನಾಡದೆ, ಬಿಜೆಪಿಯವರಂತೆಯೇ ಮಾತನಾಡುತ್ತಾರೆ' ಎಂದು ಪಿತ್ರೋಡಾ ಪ್ರತಿಪಾದಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ