Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಏನಿದು ಮತ್ತೆ ಲಾಕ್ ಡೌನ್ ಗುಸುಗುಸು ?

ನವದೆಹಲಿ: ಎಲ್‌ಪಿಜಿ ಬಿಕ್ಕಟ್ಟು ಸೃಷ್ಟಿಯಾಗಿರುವುದರಿಂದ

ದೇಶದಾದ್ಯಂತ ಲಾಕ್‌ಡೌನ್ ಜಾರಿಯಾಗಲಿದೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತು, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇಂಧನ ವ್ಯತ್ಯಯ ಕುರಿತ ಕಳವಳಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

'ದೇಶದಲ್ಲಿ ಲಾಕ್‌ಡೌನ್ ಜಾರಿಯಾಗಲಿದೆ ಎಂಬುದು ಶುದ್ಧ ಸುಳ್ಳು. ಅಂತಹ ಯಾವುದೇ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸುತ್ತೇನೆ' ಎಂದಿದ್ದಾರೆ.

ಸಚಿವರೂ ಆಗಿರುವ ಪುರಿ, 'ತೈಲ, ಇಂಧನ ಹಾಗೂ ಇತರ ಅಗತ್ಯ ಸರಕುಗಳ ಸರಬರಾಜನ್ನು ಖಾತ್ರಿಪಡಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಯಾವುದೇ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸಜ್ಜಾಗಿದ್ದೇವೆ' ಎಂದು ಮಾಹಿತಿ ನೀಡಿದ್ದಾರೆ.

ಇಂತಹ ಜಾಗತಿಕ ಅನಿಶ್ಚಿತತೆ ಎದುರಾದಾಗ ಭಾರತ ಈ ಹಿಂದೆಯೂ ಪುಟಿದೇಳುವ ಸಾಮರ್ಥಯವನ್ನು ಪ್ರದರ್ಶಿಸಿದೆ. ಅದೇ ರೀತಿ 'ಅಗತ್ಯಕ್ಕೆ ತಕ್ಕಂತೆ, ಪೂರ್ವ ಸಿದ್ಧತೆ ಮತ್ತು ಸಂಘಟನಾತ್ಮಕವಾಗಿ ಕಾರ್ಯ ನಿರ್ವಹಿಸುವುದನ್ನು ಭಾರತ ಮುಂದುವರಿಸುತ್ತದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಬೇಜನ್ಸಾರಿ ಹಾಗೂ ಸಮಸ್ಯೆ ಸೃಷ್ಟಿಸುವಂತಹ ವದಂತಿಗಳನ್ನು ಯಾರೂ ಹರಡಬಾರದರು ಎಂದೂ ಪುರಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ