Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಂಡೀಸ್ ಪ್ರವಾಸ ವೇಳಾಪಟ್ಟಿ ಪ್ರಕಟ

 

ದೆ​ಹ​ಲಿ :
ಭಾರತ ತಂಡ ಜುಲೈ12 ರಿಂದ ಆಗಸ್ಟ್‌ 13ರ ವರೆಗೂ ವೆಸ್ಟ್‌​ಇಂಡೀಸ್‌ ಪ್ರವಾಸ ಕೈಗೊ​ಳ್ಳ​ಲಿದ್ದು, ಸೋಮ​ವಾರ ಬಿಸಿ​ಸಿಐ ಅಧಿ​ಕೃತ ವೇಳಾ​ಪಟ್ಟಿ ಪ್ರಕ​ಟಿ​ಸಿತು. ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಪ್ರವಾಸದಲ್ಲಿ 2 ಪಂದ್ಯಗಳ ಟೆಸ್ಟ್ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಇತ್ತೀಚೆಗಷ್ಟೇ ಮುಕ್ತಾಯವಾದ ಎರಡನೇ ಆವತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ಮುಗ್ಗರಿಸುವ ಮೂಲಕ ಟೀಂ ಇಂಡಿಯಾ ರನ್ನರ್ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದೀಗ ಸುಮಾರು ಒಂದು ತಿಂಗಳ ಬಿಡುವಿನ ಬಳಿಕ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳುವ ಮೂಲಕ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಭಾಗವಾಗಿರುವ ಎರಡು ಪಂದ್ಯಗಳ ಟೆಸ್ಟ್‌ ಸರ​ಣಿಯ ಮೊದಲ ಪಂದ್ಯ ಜುಲೈ 12ರಿಂದ ಡೊಮಿ​ನಿ​ಕಾ​ದಲ್ಲಿ ಆರಂಭ​ವಾ​ಗ​ಲಿ​ದ್ದು, ಜುಲೈ 20ರಿಂದ 2ನೇ ಟೆಸ್ಟ್‌ ಪಂದ್ಯ ಟ್ರಿನಿ​ಡಾ​ಡ್‌​ನ​ಲ್ಲಿ ನಡೆ​ಯ​ಲಿದೆ. ಬಳಿಕ ಜುಲೈ 27, 29ರಂದು ಮೊದ​ಲೆ​ರಡು ಏಕ​ದಿನಕ್ಕೆ ಬಾರ್ಬ​ಡಾ​ಸ್‌​, ಆಗಸ್ಟ್‌ 1ರಂದು 3ನೇ ಏಕ​ದಿ​ನಕ್ಕೆ ಟ್ರಿನಿ​ಡಾಡ್‌ ಆತಿಥ್ಯ ವಹಿ​ಸ​ಲಿದೆ.

ಆಗಸ್ಟ್‌ 3ರಿಂದ ಟ್ರಿನಿ​ಡಾ​ಡ್‌​ನಲ್ಲೇ 5 ಪಂದ್ಯಗಳ ಟಿ20 ಸರಣಿ ಆರಂಭ​ವಾ​ಗ​ಲಿದ್ದು, 2 ಮತ್ತು 3ನೇ ಪಂದ್ಯ ಕ್ರಮ​ವಾಗಿ ಆಗಸ್ಟ್‌ 6, 8ಕ್ಕೆ ಗಯಾ​ನ​ದಲ್ಲಿ, 4 ಮತ್ತು 5ನೇ ಪಂದ್ಯ ಆಗಸ್ಟ್ 12 ಮತ್ತು 13ರಂದು ಫ್ಲೋರಿಡಾ​ದಲ್ಲಿ ನಡೆ​ಯ​ಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ