Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದಿನಿಂದ ಗಾಳಿ-ಮಳೆ: ಬೆಳಗಾವಿ ಸೇರಿ 28 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರಿ ಗಾಳಿ ಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ.

ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರ ಈ ಜಿಲ್ಲೆಗಳಿಗೂ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ.

ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಕೋಲಾರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಗುರುವಾರದಿಂದ ರಾಜ್ಯದ ವಿವಿಧೆಡೆ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದ್ದು, ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ