Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೋದಿ ನೇತೃತ್ವದಲ್ಲಿ ಯೋಗ ದಿನ

 

ವಿಶ್ವಸಂಸ್ಥೆ:
9ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ವಿಶ್ವಸಂಸ್ಥೆಯಲ್ಲಿ ನಡೆಯಲಿರುವ ಯೋಗ ಅಧಿವೇಶನದ ನೇತೃತ್ವವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ.

ಅಂತರರಾಷ್ಟ್ರೀಯ ಯೋಗ ದಿನವನ್ನು ವಾರ್ಷಿಕ ಸಂಸ್ಮರಣೆಯಾಗಿ ಆಚರಿಸಲು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಮೋದಿ ಪ್ರಸ್ತಾಪಿಸಿದ ಒಂಭತ್ತು ವರ್ಷಗಳ ಬಳಿಕ, ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಐತಿಹಾಸಿಕ ಸಂಸ್ಮರಣೆಯ ಯೋಗ ಅಧಿವೇಶನ ನಿಗದಿಯಾಗಿದೆ. ಇದರ ನೇತೃತ್ವವನ್ನು ಸ್ವತಃ ಮೋದಿ ಅವರೇ ವಹಿಸುತ್ತಿದ್ದಾರೆ.
ಜೂನ್ 21ರಂದು ಬೆಳಿಗ್ಗೆ 8ರಿಂದ 9ರವರೆಗೆ ಯೋಗ ಅಧಿವೇಶನ ವಿಶ್ವಸಂಸ್ಥೆಯ ಕೇಂದ್ರ ಕಚೇರಿಯ ಉತ್ತರದ ಹುಲ್ಲುಹಾಸಿನಲ್ಲಿ ನಡೆಯಲಿದೆ. ಕಳೆದ ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಿರುವ ಭಾರತವು ವಿಶ್ವಸಂಸ್ಥೆಗೆ ಕೊಡುಗೆಯಾಗಿ ನೀಡಿರುವ ಮಹಾತ್ಮಾ ಗಾಂಧಿ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಗುತ್ತದೆ.

ಯೋಗ ಸಮ್ಮೇಳನದಲ್ಲಿ ವಿಶ್ವಸಂಸ್ಥೆಯ ಉನ್ನತ ಅಧಿಕಾರಿಗಳು, ವಿವಿಧ ದೇಶಗಳ ರಾಯಭಾರಿಗಳು, ರಾಜತಾಂತ್ರಿಕರು, ಪ್ರತಿನಿಧಿಗಳು ಹಾಗೂ ಅನಿವಾಸಿಗರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ವಿಶ್ವಸಂಸ್ಥೆಯಲ್ಲಿ ಮುಂದಿನ ವಾರ ನಡೆಯಲಿರುವ 9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ನರೇಂದ್ರ ಮೋದಿ ಅವರೊಂದಿಗೆ ಭಾಗವಹಿಸಲು ಎದುರು ನೋಡುತ್ತಿದ್ದೇನೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದ ಅಧ್ಯಕ್ಷ ಸಬಾ ಕೊರೊಸಿ ಟ್ವೀಟ್ ಮಾಡಿದ್ದಾರೆ.

ಯೋಗಾಭ್ಯಾಸದಿಂದ ಆಗುವ ಪ್ರಯೋಜನಗಳ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವುದು ಅಂತರರಾಷ್ಟ್ರೀಯ ಯೋಗ ದಿನದ ಉದ್ದೇಶವಾಗಿದೆ. 2014ರ ಡಿಸೆಂಬರ್‌ನಲ್ಲಿ ವಿಶ್ವಸಂಸ್ಥೆಯು ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ