Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಯೋಗೀಶಗೌಡ ಕೊಲೆ ಪ್ರಕರಣ: ಅಪರಾಧಿ ವಿನಯ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ 16 ಜನ ತಪ್ಪಿತಸ್ಥರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಇನ್‌ಸ್ಪೆಕ್ಟ‌ರ್ ಚನ್ನಕೇಶವ ಟಿಂಗರೀಕರ್‌ಗೆ ಏಳು ವರ್ಷ ಕಾರಾಗೃಹ ಶಿಕ್ಷೆಯನ್ನು ನ್ಯಾಯಾಧೀಶರು ಪ್ರಕಟಿಸಿದರು.

ಶುಕ್ರವಾರ ನ್ಯಾಯಾಲಯದಲ್ಲಿ ಎಲ್ಲಾ ಅಪರಾಧಿಗಳನ್ನೂ ಪೊಲೀಸರು ಹಾಜರುಪಡಿಸಿದರು. ಮಧ್ಯಾಹ್ನ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಾಯಿತು.

ಪ್ರಕರಣದಲ್ಲಿನ 17 ಆರೋಪಿಗಳನ್ನು 'ಅಪರಾಧಿಗಳು' ಎಂದು ಬುಧವಾರ ನಿರ್ಣಯಿಸಿದ್ದ, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು, ಶುಕ್ರವಾರ ಶಿಕ್ಷೆಯ ಪ್ರಮಾಣ ನಿರ್ಧರಿಸಿ ಘೋಷಿಸಿದರು.

ಶಿಕ್ಷೆಯ ಪ್ರಮಾಣ ನಿರ್ಧರಿಸುವ ಕುರಿತು ಗುರುವಾರ ನಡೆದ ವಿಚಾರಣೆಯಲ್ಲಿ ಕಾನೂನಿನ ತತ್ವಗಳಿಗೆ ಅನುಗುಣವಾಗಿ ಗರಿಷ್ಠ ಶಿಕ್ಷೆಗೆ ವಿನಾಯ್ತಿ ಕೋರುವ ಅಪರಾಧಿಗಳ ಮನವಿಯನ್ನು ನ್ಯಾಯಾಧೀಶರು ಆಲಿಸಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?