Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ವಿಮಾನ ನಿಲ್ದಾಣದ ಬಳಿ ಯುವಕನ ಹತ್ಯೆ

ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣದ ಕಂಪೌಂಡ್ ಬಳಿ ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಸೋಮವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನಿಹಾಳ ಮತ್ತು ಮಾವಿನಕಟ್ಟಿ ಗ್ರಾಮದ ಬಳಿಯ ಬೆಳಗಾವಿ ವಿಮಾನ ನಿಲ್ದಾಣದ ಕಂಪೌಂಡ್ ಸನಿಹದ ಹೊಲದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಯುವಕನ ಜೇಬಿನಲ್ಲಿ ದ್ವಿಚಕ್ರ ವಾಹನದ ಕೀಲಿ ಕೈ ಪತ್ತೆಯಾಗಿದೆ. ಯುವಕನ ಗುರುತು ಪತ್ತೆಯಾಗಿಲ್ಲ. ಕಲ್ಲಿನಿಂದ ತಲೆಗೆ ಜಜ್ಜಿ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ರೈತರು ಮೃತದೇಹ ನೋಡಿ ಗಾಬರಿಗೊಂಡು ಕೂಡಲೇ ಮಾರಿಹಾಳ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೆಲಹೊತ್ತು ಮಾವಿನಕಟ್ಟಿ ರಸ್ತೆ ಮಾರ್ಗದಲ್ಲಿ ವಾಹನಗಳನ್ನು ಓಡಾಡದಂತೆ ಪೊಲೀಸರು ತಡೆಹಿಡಿದು ಸ್ಥಳವನ್ನು ಮಹಜರು ಮಾಡಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?